Connect with us

    LATEST NEWS

    ದ. ಕ. ಜಿಲ್ಲೆಯಲ್ಲಿ ಕೊರೊನಾಗೆ 42ನೇ ಬಲಿ – ಬೆಳ್ತಂಗಡಿಯ 60 ರ ವೃದ್ಧ ಸಾವು

    ಮಂಗಳೂರು, ಜುಲೈ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇಂದು ಬೆಳ್ತಂಗಡಿಯ 60ರ ವೃದ್ದರೊಬ್ಬರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.


    ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿಯಾದ 60 ವರ್ಷದ ವೃದ್ಧ ಇಂದು ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ಹಿಂದೆ ಕೊರೊನಾ ಲಕ್ಷಣ ಕಾಣಿಸಿಕೊಂಡ ಕಾರಣ ಎರಡು ದಿನಗಳ ಹಿಂದೆ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಬೆಳಿಗ್ಗೆ ಮನೆಯಲ್ಲೇ ವೃದ್ಧ ಸಾವನ್ನಪ್ಪಿದ್ದು ವರದಿಯಲ್ಲೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply