ಬೆಂಗಳೂರು ಡಿಸೆಂಬರ್ 15: ಕನ್ನಡದ ಬೆಡಗಿನ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂಡು ಡೀಫ್ ಫೇಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿಂದೆ ಅವರ ಡೀಫ್ ಫೇಕ್ ವಿಡಿಯೋ ವೈರಲ್ ಆಗಿ ಇಡೀ ದೇಶದ ಗಮನ ಸೆಳೆದಿತ್ತು. ಕೇಂದ್ರ ಸರಕಾರ ಡೀಫ್ ಪೇಕ್ ವಿಡಿಯೋ ವಿರುದ್ದ ಕಠಿಣಕ್ರಮದ ಬಗ್ಗೆ ಆದೇಶ ಹೊರಡಿಸಿದ್ದರು, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿದೆ.


ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಹಳೆಯ ವಿಡಿಯೋ ರೀತಿಯ ಮತ್ತೊಂದು ವಿಡಿಯೋ ವೈರಲ್ ಆಗಿದ್ದು. ಲಿಪ್ಟ್ ನೊಳೆಗ ಬರುವ ಯುವತಿಯೊಬ್ಬಳಿಗೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಡೀಫ್ ಫೇಕ್ ತಂತ್ರಜ್ಞಾನವನ್ನು ಬಳಿಸಿ ಮಾರ್ಪಿಂಗ್ ಮಾಡಲಾಗಿದೆ. ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

 

Share Information