LATEST NEWS
ಮಂಗಳೂರು ಪೊಲೀಸರಿಂದ ಮತ್ತೊಬ್ಬ ಡ್ರಗ್ ಪೆಡ್ಲರ್ ಆರೆಸ್ಟ್

ಮಂಗಳೂರು ಸೆಪ್ಟೆಂಬರ್ 28: ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ರಗ್ಸ್ ಪೆಡ್ಲರ್ ಗಳ ಭೇಟೆ ಆರಂಭಿಸಿದ್ದು, ಇಂದು ಮತ್ತೊಬ್ಬ ಡ್ರಗ್ಸ್ ದಂಧೆಯ ಮತ್ತೊರ್ವ ಪ್ರಮುಖ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಶಾನ್ ಎಂದು ಗುರುತಿಸಲಾಗಿದ್ದು, ಈತ ಮೂಲತಃ ಮಂಗಳೂರಿನ ಬಂದರು ನಿವಾಸಿ. ಬಂಧಿತ ಡ್ರಗ್ ಪೆಡ್ಲರ್ ಶಾನ್ ತರುಣ್ ರಾಜ್‍ನ ಪಾರ್ಟಿಗಳಿಗೆ ಡ್ರಗ್ಸ್ ನೀಡುತ್ತಿದ್ದ. ಇತ್ತೀಚಿಗೆ ಬಂಧನವಾಗಿದ್ದ ಶಾಕೀರ್ ಮೂಲಕ ಡ್ರಗ್ಸ್ ಪಾರ್ಟಿಗಳಿಗೆ ಶಾನ್ ನಿಂದ ಡ್ರಗ್ಸ್ ಮಾಡಲಗುತ್ತಿತ್ತು ಎಂಬ ಮಾಹಿತಿ ಆಧರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮುಂಬೈ, ಗೋವಾದಿಂದ ಡ್ರಗ್ಸ್ ತರಿಸಿಕೊಡುತ್ತಿದ್ದ ಶಾನ್, ರಾಜ್ಯದ ವಿವಿಧೆಡೆ ನಡೆಯುವ ಪರ್ಟಿಗಳಿಗೆ ಸಪ್ಲೈ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಮಂಗಳೂರು ಸಿಸಿಬಿ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆ.
