Connect with us

KARNATAKA

ಉಡುಪಿ ಕೋಟಾ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಕೇಸ್ ..!

Share Information

ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಉಡುಪಿ: ಉದ್ಯಮಿಗೆ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ವಿರುದ್ಧ ಉಡುಪಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಬಟ್ಟೆ ಅಂಗಡಿ ತೆರೆಯುವ ಹೆಸರಿನಲ್ಲಿ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಸುಧೀನಾ ಎಂಬವರು ನೀಡಿದ ದೂರಿನ ಮೇರೆಗೆ ಚೈತ್ರಾ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಹಿಂದು ಧ್ವಜ, ಕೇಸರಿ ಬಂಟಿಂಗ್ಸ್ ಉದ್ಯಮ ಆರಂಭಿಸುವುದಾಗಿ ಸುಮಾರು 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಧೀನಾ, 2015ರಲ್ಲಿ ನಡೆದ ಗೋ ರಕ್ಷಣಾ ಸಮಾವೇಶದ ವೇಳೆ ಚೈತ್ರಾ ಅವರ ಪರಿಚಯವಾಯಿತು.

ಬಟ್ಟೆ ಅಂಗಡಿಯನ್ನು ತೆರೆಯಲು ಮೀನುಗಾರಿಕೆ ಮತ್ತು ಇತರ ಮೂಲಗಳಿಂದ ಹಣವನ್ನು ಸಂಗ್ರಹಿಸಿದ ಆತ ಚೈತ್ರಾ ಅವರಿಗೆ 2 ಲಕ್ಷ ರೂಪಾಯಿ ನಗದು ನೀಡಿದ್ದರು. ಇನ್ನೂ 3 ಲಕ್ಷ ರೂಪಾಯಿಯನ್ನು ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಂತರ ಆಂಧ್ರಪ್ರದೇಶದಲ್ಲಿ ಕೆಲಸದ ನಿಮಿತ್ತ ತೆರಳಿದ್ದ ಸಂದರ್ಭದಲ್ಲಿ ಆಕೆಯ ಹೆಸರಿನಲ್ಲಿ ಬಟ್ಟೆ ಅಂಗಡಿ ತೆರೆಯಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ. ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ, ತನ್ನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಸುಧೀನಾ ಆರೋಪಿಸಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply