ಅಪ್ರಾಪ್ತೆಯ ಮೇಲೆ ಗ್ರಾಮಪಂಚಾಯಿತಿ ಸಿಬ್ಬಂದಿ ಸೇರಿ 5 ಜನರಿಂದ ಗ್ಯಾಂಗ್ ರೇಪ್

ಪುತ್ತೂರು ಜುಲೈ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. 17 ವರ್ಷದ ಅಪ್ರಾಪ್ತೆಯ ಮೇಲೆ 5 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿಟ್ಲ ನಿವಾಸಿಯಾಗಿರುವ 17 ವರ್ಷದ ಬಾಲಕಿಯ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿ ಐವರ ಗುಂಪೊಂದು ಸಾಮೂಹಿಕವಾಗಿ ನಿರಂತರ ಅತ್ಯಾಚಾರ ನಡೆಸಿದ್ದಾರೆ.

ಅಲ್ಲದೆ ಈ ಬಗ್ಗೆ ಯಾರಿಗೂ ಹೇಳದಂತೆ ಐವರೂ ಕೂಡ ಅಪ್ರಾಪ್ತೆ ಬಾಲಕಿಗೆ ಬೆದರಿಕೆ ಹಾಕಿದ್ದರು. ಆದರೆ, ಆಶಾ ಕಾರ್ಯಕರ್ತೆಯೊಬ್ಬರು ಬಾಲಕಿ ಗರ್ಭಿಣಿಯಾಗಿರುವುದನ್ನು ಮನಗಂಡು, ಬಾಲಕಿಯ ವಿಚಾರಣೆ ಮಾಡಿ ಪ್ರಕರಣ ಬಯಲಿಗೆಳೆದಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ತನಿಖೆ ಕೈಗೊಂಡಿದ್ದಾರೆ.