Connect with us

    KARNATAKA

    ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ: ಓರ್ವ ಸಾವು ಇಬ್ಬರು ಆಸ್ಪತ್ರೆಗೆ ದಾಖಲು

    ಹಾಸನ, ಎಪ್ರಿಲ್ 04: ಹಾಸನ ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ.

    ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಸಂಪತ್(27) ಎಂಬವರು ಮೃತಪಟ್ಟಿದ್ದು, ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರನ್ನು ಹಾಸನ ಆಸ್ಪತ್ರೆಗೆ ಮತ್ತೊಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಲ್ಲುಗಣಿಗಾರಿಕೆಗೆ ಸ್ಪೋಟಕಗಳನ್ನು ಸಂಗ್ರಹಿಸಲಾಗಿದ್ದು ಇಂದು ವಿತರಣೆಯ ವೇಳೆಯಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀವ್ರತೆಗೆ ಚಾಕೇನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply