LATEST NEWS
ಪ್ರಕ್ಷುಬ್ದ ಸ್ಥಿತಿಯಲ್ಲಿ ಮಂಗಳೂರು – ಕಣ್ಣೂರಿನಲ್ಲಿ ಯುವಕನಿಗೆ ಚೂರಿ ಇರಿತ

ಮಂಗಳೂರು ಮೇ 02: ನಗರದ ಹೊರವಲಯದ ಕಣ್ಣೂರಿನಲ್ಲಿ ಯುವಕನೊಬ್ಬನಿಗೆ ಶುಕ್ರವಾರ ನಸುಕಿನಲ್ಲಿ ಚೂರಿ ಇರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಯುವಕನನ್ನು ಇರ್ಷಾದ್ ಎಂದು ಗುರುತಿಸಲಾಗಿದೆ. ಯುವಕ ಬೆಳಿಗ್ಗೆ ಕೆಲಸಕ್ಕೆ ಹೊರಟಿದ್ದ ಎಂದು ಮೂಲಗಳು ತಿಳಿಸಿವೆ.
ಸುಹಾಸ್ ಶೆಟ್ಟಿ ಘಟನೆಯ ಬಳಿಕ ಕರಾವಳಿ ಪ್ರಕ್ಷುಬ್ಧವಾಗಿದೆ. ಬಜಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಘಟನೆ ನಡೆದ ಬಳಿಕ ಅಲ್ಲಲ್ಲಿ ದಾಳಿ ಸುದ್ದಿಗಳು ಬರಲಾರಂಭಿಸಿದೆ.
ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಗಾಯಗೊಂಡ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ.

ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೀನು ವ್ಯಾಪಾರಿಯೋರ್ವರು ನಗರದ ಕುಂಟಿಕಾನದಲ್ಲಿ ಗ್ರಾಹಕರೊಬ್ಬರನ್ನು ಕಾಯುತ್ತಿದ್ದಾಗ, ಅವರ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಹಲ್ಲೆಗೊಳಗಾದ ಮೀನು ವ್ಯಾಪಾರಿಯನ್ನು ಉಳ್ಳಾಲದ ಲುಕ್ಮಾನ್ ಎಂದು ಗುರುತಿಸಲಾಗಿದೆ.