KARNATAKA
ಕುಟುಂಬವನ್ನು ಸರ್ವನಾಶ ಮಾಡಿದ ಕೊರೊನಾ..ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ..!
ಬೆಂಗಳೂರು: ಕೊರೊನಾದಿಂದಾಗಿ ತಮ್ಮ ಬಂದುಗಳನ್ನು ಕಳೆದುಕೊಂಡಿರುವವರು ಇದೀಗ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಇದೀಗ ಪತಿ ಕೊರೊನಾದಿಂದ ಮೃತಪಟ್ಟ ಹಿನ್ನಲೆ ನೋವು ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆತ್ಮಹತ್ಯೆಗೆ ಶರಣಾದವರನ್ನು ವಸಂತಾ(40), ಯಶ್ವಂತ್(15), ನಿಶ್ಚಿತಾ(6) ಎಂದು ಗುರುತಿಸಲಾಗಿದೆ. ರೂಂ ಒಂದರಲ್ಲಿ ತಾಯಿ ಮಗಳು ಒಂದೇ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಮತ್ತೊಂದು ಕಡೆ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಮನೆಯಿಂದ ಯಾರೂ ಹೊರಬರುತ್ತಿಲ್ಲ ಎಂದು ಸಂಶಯಗೊಂಡು ಸ್ಥಳೀಯ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಾದನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಿಎಂಟಿಸಿ ಪೀಣ್ಯ ಡಿಪೋದಲ್ಲಿ ನಿರ್ವಾಹಕರಾಗಿದ್ದ ಪತಿ ಪ್ರಸನ್ನಕುಮಾರ್ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದರು. ಪ್ರಸನ್ನಕುಮಾರ್ ಸಾವಿನ ಜಿಗುಪ್ಸೆಯಲ್ಲೇ ಮೂವರು ಆತ್ಮಹತ್ಯೆಗೆ ಶರಣಾಗಿದ್ದು ಮನೆಯಲ್ಲಿ ವಸಂತ ಬರೆದ ಡೆತ್‍ನೋಟ್ ಸಿಕ್ಕಿದೆ ಮಕ್ಕಳನ್ನು ಬಿಟ್ಟು ನಾನು ಒಬ್ಬಳೇ ಸಾಯಲು ತಯಾರಿಲ್ಲ. ಮನೆ ಖರೀದಿಗೆ ಸಾಲ ಮಾಡಿದ್ದೇವೆ. ಮನೆಯನ್ನು ಮಾರಾಟ ಮಾಡಿ ಸಾಲ ತೀರಿಸಿ. ಉಳಿದ ಹಣವನ್ನು ಅನಾಥಾಶ್ರಮಕ್ಕೆ ನೀಡಿ ಎಂದು ವಸಂತಾ 2 ಪುಟಗಳ ಡೆತ್‍ನೋಟ್ ಬರೆದಿದ್ದಾರೆ.