ಗುಡ್ ನ್ಯೂಸ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ರೋಗದಿಂದ ಮುಕ್ತ

ಮಂಗಳೂರು ಎಪ್ರಿಲ್ 6: ಕೊರೊನಾದಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಯ ಜನತೆಗೆ ಇಂದು ಖುಷಿಯ ದಿನವಾಗಿದೆ. ಭಟ್ಕಳದ ಯುವಕ ಕೊರೊನಾ ರೋಗದಿಂದ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಮತ್ತೆ ಇಂದು ಮೂರು ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ರತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಕೊರೋನ ಸೋಂಕಿತ ಕಾಸರಗೋಡಿನ ನಾಲ್ವರ ಪೈಕಿ ಸಂಪೂರ್ಣ ಗುಣಮುಖರಾದ ಮೂವರು ಸೋಮವಾರ ನಗರದ ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ವಿದೇಶದಿಂದ ವಿಮಾನದ ಮೂಲಕ ಮಂಗಳೂರಿಗೆ ಬಂದಿದ್ದ ಈ ನಾಲ್ವರಲ್ಲಿ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಈಚೆಗೆ ಸತತ ಪರೀಕ್ಷೆಗಳಲ್ಲಿ ನೆಗೆಟಿವ್ ವರದಿ ಬಂದಿತ್ತು. ಸೋಮವಾರ ಕ್ವಾರಂಟೈನ್ ಪೂರ್ಣಗೊಳಿಸಲಿದ್ದು, ಸಂಜೆ ವೇಳೆಗೆ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಸೋಂಕಿತರಲ್ಲಿ ಗುಣಮುಖ ಹೊಂದಿ ಬಿಡುಗಡೆ ಹೊಂದಿದವರ ಸಂಖ್ಯೆ ನಾಲ್ಕಕ್ಕೇರಿದೆ. ಇನ್ನುಳಿದವರ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.