Connect with us

    BELTHANGADI

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೊಂದು ಎಫ್ಐಆರ್

    ಬೆಳ್ತಂಗಡಿ ಮೇ 22: ಬಿಜೆಪಿ ಮುಖಂಡರೊಬ್ಬರನ್ನು ಕಲ್ಲಿನ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧನ ಮಾಡಿರುವುದನ್ನು ಖಂಡಿಸಿ ನಡೆಸಿದ ಪ್ರತಿಭಟನೆ ವೇಳೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮಂಗಳವಾರ ಮತ್ತೊಂದು ಎಫ್ಐಆರ್ ದಾಖಲಾಗಿದೆ.


    ಶಶಿರಾಜ್‌ ಶೆಟ್ಟಿ ಬಂಧನ ಖಂಡಿಸಿ ಬೆಳ್ತಂಗಡಿಯ ವಿಕಾಸಸೌಧದ ಎದುರು ಸೋಮವಾರ ಬಿಜೆಪಿ ವತಿಯಿಂದ ನಡೆಸಿದ್ದ ಪ್ರತಿಭಟನೆಗೆ ಸಂಬಂಧಪಟ್ಟ ಇಲಾಖೆಯಿಂದ ಪೂರ್ವಾನುಮತಿ ಪಡೆದಿರಲಿಲ್ಲ. ಶಾಸಕ ಹರೀಶ್ ಪೂಂಜ ಮತ್ತು ಇತರರು ಸೇರಿ ಈ ಪ್ರತಿಭಟನೆ ಸಭೆ ನಡೆಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಎಂದು ಈ ಪ್ರತಿಭಟನಾ ಸಭೆಯಲ್ಲಿ ಹರೀಶ್‌ ಪೂಂಜ ಹೇಳಿದ್ದಾರೆ. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಸಿದ್ದಾರೆ. ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್‌ಗೆ, ಇತರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಇಲಾಖೆಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಅವಮಾನ ಮಾಡಿದ್ದಾರೆ. ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ಸಲುವಾಗಿ ತಾಲ್ಲೂಕು ಕಚೇರಿಗೆ ಹೋಗದಂತೆ ತಡೆ ಒಡ್ಡಿದ್ದಾರೆ. ಈ ಅಂಶಗಳು ಎಫ್‌ಐಆರ್‌ನಲ್ಲಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply