ಕಾಂಗ್ರೇಸ್ ಗೆ ತಾಕತ್ತಿದ್ದರೆ ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ- ಸುನಿಲ್ ಕುಮಾರ್

ಪುತ್ತೂರು ಎಪ್ರಿಲ್ 9: ಕಾಂಗೇಸ್ ಪಕ್ಷ ತಾಕತ್ತಿದ್ದರೆ ರಾಹುಲ್ ಗಾಂಧಿಯವರನ್ನು ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ, ಬಿಜೆಪಿ ವಿಧಾನಸಭಾ ಸಚೇತಕ ಸುನಿಲ್ ಕುಮಾರ್ ಸವಾಲೆಸೆದಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷಕ್ಕೆ ಮೋದಿಯ ಬಗ್ಗೆ ಬಿಜೆಪಿಗಿಂತಲೂ ಹೆಚ್ಚಿನ ಕಾಳಜಿಯಿದೆ. ಪ್ರತಿಯೊಂದು ವಿಷಯದಲ್ಲೂ ಮೋದಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದ ಅವರು ಬಿಜೆಪಿ ಪಕ್ಷ ಎಂದಿಗೂ ಒಂದು ಜಾತಿ, ಸಮುದಾಯದ ಹಿಂದೆ ಹೋಗಿಲ್ಲ ಎಂದ ಅವರು ಜೆಡಿಎಸ್ ಹಾಗೂ ಕಾಂಗ್ರೇಸ್ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾಗಿದೆ ಎಂದರು.

ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಭಜರಂಗದಳ, ಆರ್.ಎಸ್.ಎಸ್ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಆದರೆ ಪ್ರತಿ ಗ್ರಾಮದಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲಿ ಭಜರಂಗದಳದ ಘಟಕವನ್ನು ಆರಂಭಿಸುವುದಲ್ಲದೆ, ಸ್ವತ ಮಿಥುನ್ ರೈ ಮನೆಗೂ ನಮ್ಮ ಸಿದ್ಧಾಂತಗಳನ್ನು ಮುಟ್ಟಿಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ತಿಮ್ಮಪ್ಪ ಶೆಟ್ಟಿ, ಜೀವಂಧರ್ ಜೈನ್ ಉಪಸ್ಥಿತರಿದ್ದರು.

VIDEO