Connect with us

LATEST NEWS

ದಕ್ಷಿಣಕನ್ನಡ ಮತ್ತು ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

ಮಂಗಳೂರು ಮೇ 03: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ಯನ್ನು ರಚಿಸಲಿದ್ದೇವೆ’ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬಳಿಕ ಜಿಲ್ಲೆಯ  ಕೋಮುಸೂಕ್ಷ್ಮ ಪರಿಸ್ಥಿತಿಯ ಕುರಿತು ಅವಲೋಕಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಜೊತೆ ಶನಿವಾರ ವಿಶೇಷ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು ರಚಿಸುತ್ತಿದ್ದೇವೆ. ಈ ಕಾರ್ಯಪಡೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದೆ. ಕೋಮುವಾದವನ್ನು ಬೆಂಬಲಿಸುವ ಅಥವಾ ಉತ್ತೇಜಿಸುವವರ ವಿರುದ್ಧ ಕೋಮು ವಿರೋಧಿ ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆಯನ್ನು ನಕ್ಸಲ್ ನಿಗ್ರಹ ಪಡೆ ಮಾದರಿಯಲ್ಲಿ ಪ್ರತ್ಯೇಕವಾಗಿ ರಚಿಸುತ್ತೇವೆ. ಇದು ಪೊಲೀಸರ ಸಹಯೋಗದಲ್ಲಿ ಕೆಲಸ ಮಾಡಲಿದೆ. ಯಾರು ಕೋಮು ಚಟುವಟಿಕೆಗಳನ್ನು ನಡೆಸುತ್ತಾರೆ, ಯಾರು ಅದನ್ನು ಬೆಂಬಲಿಸುತ್ತಾರೆ, ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾರ್ಯಪಡೆಗೆ ಒದಗಿಸುತ್ತೇವೆ’ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *