Connect with us

    KARNATAKA

    ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ : ಸಿಎಂ ಇಬ್ರಾಹಿಂ ಜೆಡಿಎಸ್‌ ಪಕ್ಷದಿಂದ ಔಟ್..!

    ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ  ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

    ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ.

    ದಿನಾಂಕ: 15-11-2023ರಂದು, ಕೇರಳ ರಾಜ್ಯದ ತಿರುವನಂತಪುರಂನಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಿ.ಕೆ. ನಾನು ರವರು ಪಕ್ಷದ ಹೆಸರಿನಲ್ಲಿ ಅನಧಿಕೃತವಾಗಿ ಕರೆದಿದ್ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ, ರಾಜ್ಯದಲ್ಲಿನ ಜೆಡಿಎಸ್-ಬಿಜೆಪಿ ಹೊಂದಾಣಿಕೆ ಬಗ್ಗೆ ವಿರೋಧಬಾಸ ಹೇಳಿಕೆ ನೀಡಿ, ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply