Connect with us

DAKSHINA KANNADA

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!

ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ  ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.

ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನ ಮೇರೆಗೆ  ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ , ಪಾಲಿಕೆ ಸದಸ್ಯರುಗಳಾದ ಸಂದೀಪ್ ಹಾಗೂ ಭರತ್ ಕುಮಾರ್ ಸಹಿತ ಹಲವರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಈ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *