Connect with us

    FILM

    ಗರ್ಭಿಣಿ ಅನುಷ್ಕಾ ಶರ್ಮಾ ಅವರ ಶಿರ್ಷಾಸನದ ಪೋಟೋ ವೈರಲ್

    ಮುಂಬೈ : ಬಾಲಿವುಡ್ ನಟಿ ತುಂಬು ಗರ್ಭಿಣಿ ಅನುಷ್ಕಾ ಶರ್ಮಾ ಅವರ ಶಿರ್ಷಾಸನದ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗರ್ಭಿಣಿಯಾಗಿರುವ ಪತ್ನಿ ಅನುಷ್ಕಾ ಶರ್ಮಾ ಅವರಿಗೆ ಶಿರ್ಷಾಸನ ಮಾಡಲು ವಿರಾಟ್ ಕೊಹ್ಲಿ ಸಹಾಯ ಮಾಡಿದ್ದಾರೆ.


    ಇಂದು ಸಾಮಾಜಿಕ ಜಾಲತಾಣದಲ್ಲಿ ಹಳೆಯ ಫೋಟೋವನ್ನು ಹಂಚಿಕೊಂಡಿರುವ ಅನುಷ್ಕಾ ಶರ್ಮಾ, ಗರ್ಭವತಿಯಾದ ಸಮಯದಲ್ಲೂ ಯೋಗ ಮಾಡುವುದು ಮುಖ್ಯ ಎಂದು ಹೇಳಿದ್ದಾರೆ. ಸದ್ಯ ಈ ಫೋಟೋ ಟ್ವಿಟ್ಟರಿನಲ್ಲಿ ಟ್ರೆಂಡ್ ಆಗಿದ್ದು, ರಕುಲ್ ಪ್ರೀತ್ ಸಿಂಗ್ ಮತ್ತು ಮೌನಿ ರಾಯ್ ಸೇರಿದಂತೆ ಹಲವಾರು ನಟ-ನಟಿಯರು ಅನುಷ್ಕಾ ಫೋಟೋಗೆ ಕಮೆಂಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


    ತುಂಬು ಗರ್ಭಿಣಿಯಾಗಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ, ಅದರ ನಡುವೆಯೂ ಶೂಟಿಂಗ್​ಗಳಲ್ಲಿ ಭಾಗವಹಿಸಿದ್ದಾರೆ. ಒಂದಷ್ಟು ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದಾರೆ.  ಶಿರ್ಶಾಸನ ಮಾಡುವ ಭಂಗಿಯ ಫೋಟೋವೊಂದನ್ನು ಶೇರ್​ ಮಾಡಿಕೊಂಡಿರುವ ಅನುಷ್ಕಾ ಶರ್ಮಾ, ಯೋಗದ ಬಗ್ಗೆ ಒಂದಷ್ಟು ಅಂಶಗಳನ್ನು ಬರೆದುಕೊಂಡಿದ್ದಾರೆ. ‘ಯೋಗವು ನನ್ನ ಜೀವನದ ಒಂದು ದೊಡ್ಡ ಭಾಗವಾಗಿರುವುದರಿಂದ, ನಾನು ಗರ್ಭಿಣಿಯಾಗುವುದಕ್ಕಿಂತ ಮೊದಲು ಒಂದಷ್ಟು ಆಸನಗಳನ್ನು ಹೊರತುಪಡಿಸಿ ಎಲ್ಲಾ ಆಸನಗಳನ್ನು ನಾನು ಮಾಡಬಹುದೆಂದು ನನ್ನ ವೈದ್ಯರು ಶಿಫಾರಸು ಮಾಡಿದ್ದರು. ಅದೇ ರೀತಿ ನಾನು ಅನೇಕ ವರ್ಷಗಳಿಂದ ಮಾಡುತ್ತಿರುವ ಶಿರ್ಶಾಸನವನ್ನು ಈ ಸಲ ಗೋಡೆಯನ್ನು ಬಳಸಿದ್ದೇನೆ’ ಎಂದು ಬರೆದುಕೊಂಡು ಫೋಟೋ ಶೇರ್ ಮಾಡಿಕೊಂಡಿದ್ದಾರೆ.

    ಅಷ್ಟೇ ಅಲ್ಲ ಈ ಯೋಗಾಸನ ಅನುಷ್ಕಾ ಅವರ ಯೋಗ ಶಿಕ್ಷಕಿ ಅವರ ನೇತೃತ್ವದಲ್ಲಿಯೇ ವರ್ಚುವಲ್​ ಆಗಿಯೇ ನಡೆದಿದೆ. ಈ ರೀತಿಯ ಯೋಗಾಸನ ಮಾಡುವುದು ನನ್ನಿಷ್ಟದ ಕೆಲಸಗಳಲ್ಲೊಂದು ಎಂದೂ ಅನುಷ್ಕಾ ಹೇಳಿಕೊಂಡಿದ್ದಾರೆ. ಅಂದಹಾಗೆ, ಈ ಫೋಟೋ ಕೆಲ ದಿನಗಳ ಹಿಂದೆಯೇ ಕ್ಲಿಕ್ಕಿಸಿದ್ದು. ಸದ್ಯ ವಿರಾಟ್​ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply