Connect with us

FILM

ಅಪ್ಪು ಕಪ್ ಸೀಸನ್-2: ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಅನಾವರಣ ಮಾಡಿದ ಪ್ರಕಾಶ್ ಪಡುಕೋಣೆ..

ಬೆಂಗಳೂರು, ಜೂನ್ 21: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಲಾಗಿರುವ ಅಪ್ಪು ಕಪ್ ಸೀಸನ್-2 ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ನೆರವೇರಿದೆ.

ಭಾರತೀಯ ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಲೋಗೋ ಅನಾವರಣ ಮಾಡಿ ಆಟಗಾರರಿಗೆ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ರಾಜೇಶ್ ರೆಡ್ಡಿ, ವಾಣಿಜ್ಯಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್, ಹಿರಿಯ ಸಿನಿಮಾ ಪತ್ರಕರ್ತರಾದ ಸದಾಶಿವ ಶೆಣೈ ಉಪಸ್ಥಿತರಿದ್ದರು.

ಬಳಿಕ ಪ್ರಕಾಶ್ ಪಡುಕೋಣೆ, ಪುನೀತ್ ರಾಜ್ ಕುಮಾರ್ ಅವರು ನನಗೆ ಪರ್ಸನಲ್ ಆಗಿ ಗೊತ್ತಿದ್ದರು. ತುಂಬಾ ಫ್ರೆಂಡ್ಲಿಯಾಗಿದ್ದವರು. ಐದಾರು ವರ್ಷದ ಹಿಂದೆ ನಾವೊಂದು ಇವೆಂಟ್ ಮಾಡಿದ್ದೇವು. ಒಂದೇ ಒಂದು ಫೋನ್ ಕಾಲ್ ಗೆ ಬಂದು ನಮ್ಮ ಜೊತೆ ಎಕ್ಸಿಬ್ಯೂಷನ್ ಮ್ಯಾಚ್ ಆಡಿದ್ದರು. ಸ್ಯಾಂಡಲ್ ವುಡ್ ಇಂಡಸ್ಟ್ರೀಯಲ್ಲಿ ತುಂಬಾ ಜನ ಬ್ಯಾಡ್ಮಿಂಟನ್ ಆಡುತ್ತಾರೆ ಅನ್ನೋದನ್ನು ಕೇಳಿ ಖುಷಿ ಆಯ್ತು. ಅಪ್ಪು ಕಪ್ ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಹೀಗೆ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟರು.

ಕನ್ನಡ ಕಲಾವಿದರು, ತಂತ್ರಜ್ಞರು ಹಾಗೂ ಮಾಧ್ಯಮದವರು ಆಡಲಿರುವ ಈ ಪಂದ್ಯಾವಳಿ ಆಗಸ್ಟ್ ತಿಂಗಳಾಂತ್ಯಕ್ಕೆ ಶುರುವಾಗಲಿದೆ. ಕಳೆದ ಬಾರಿ ಒಟ್ಟು ಎಂಟು ತಂಡಗಳು ಭಾಗಿಯಾಗಿದ್ದವು. ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡದ ಪೈಕಿ ಸೃಜನ್ ಲೋಕೇಶ್ ನೇತೃತ್ವದ ರಾಜ್ ಕುಮಾರ ಕಿಂಗ್ಸ್ ಕಳೆದ ಬಾರಿ ಗೆಲುವು ಸಾಧಿಸಿತ್ತು. ಈ ಬಾರಿ ಮತ್ತಷ್ಟು ತಾರೆಯರು ಅಪ್ಪು ಕಪ್ ಸೀಸನ್-2 ಸ್ಯಾಂಡಲ್ವುಡ್ ಬ್ಯಾಡ್ಮಿಂಟನ್ ಲೀಗ್ ಮೆರಗು ಹೆಚ್ಚಿಸಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *