LATEST NEWS
ಇನ್ನು ಎರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಇನ್ನು ಎರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ
ಮಂಗಳೂರು ಎಪ್ರಿಲ್ 7: ಎಪ್ರಿಲ್ 8 ಮತ್ತು 9 ರಂದು ರಾಜ್ಯದ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಛತ್ತೀಸಗಢ್ ದಿಂದ ತಮಿಳುನಾಡಿನವರೆಗೆ ಟ್ರಫ್ (ಮೋಡಗಳ ಸಾಲು) ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಏಪ್ರಿಲ್ 8 ಹಾಗೂ 9 ರಂದು ಕರ್ನಾಟಕ ಕರಾವಳಿಯಲ್ಲಿ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.
ಈ ನಡುವೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಚದುರಿದ ಮಳೆಯಾಗಬಹುದು ಎಂದು ಹೇಳಲಾಗಿದೆ.
You must be logged in to post a comment Login