Connect with us

    LATEST NEWS

    ಗಮನಿಸಿ : ಏಪ್ರಿಲ್ 1 ರಿಂದ 30 ರ ವರೆಗೆ ಆಗುಂಬೆ ಘಾಟ್ ಬಂದ್

    ಗಮನಿಸಿ : ಏಪ್ರಿಲ್ 1 ರಿಂದ 30 ರ ವರೆಗೆ ಆಗುಂಬೆ ಘಾಟ್ ಬಂದ್

    ಉಡುಪಿ, ಮಾರ್ಚ್ 30 : ಕಳೆದ ಬಾರಿಯ ಮಳೆಗಾಲದಲ್ಲಿ ಆಗುಂಬೆ ಘಾಟಿಯ ಕೆಲವು ತಿರವುಗಳಲ್ಲಿ ಮಳೆಯಿಂದಾಗಿ ಕುಸಿತವಾಗಿದ್ದ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟ್ ಭಾಗದಲ್ಲಿ ಶಾಶ್ವತ ದುರಸ್ಥಿಗೊಳಿಸಲು ಏಪ್ರಿಲ್ 1 ರಿಂದ 30 ರ ವರೆಗೆ ಘಾಟ್ ರಸ್ತೆಯ ಮೂಲಕ ಹಾದು ಹೋಗುವ ರಸ್ತೆ ಸಂಚಾರವನ್ನು ಸಂಪೂರ್ಣ ಬಂದ್ ಮಾಡಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

    ಈ ಮೊದಲು ಮಾರ್ಚ್ ತಿಂಗಳಲ್ಲಿ ಆಗುಂಭೆ ಘಾಟ್ ಬಂದ್ ಮಾಡಲು ಉದ್ದೇಶಿಸಲಾಗಿತ್ತು. ಆದರೆ ವಿಧ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಆದ್ದರಿಂದ ಆದೇಶವನ್ನು ಮುಂದೂಡಲಾಗಿತ್ತು.

    ಆಗುಂಬೆ ಘಾಟ್ ಬಂದ್ ನಂತರ ಎಪ್ರಿಲ್ 1 ಆ ಅವಧಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್ , ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು, ಉಡುಪಿ- ಕಾರ್ಕಳ- ಮಾಳಾಘಾಟ್- ಶೃಂಗೇರಿ-ಕೊಪ್ಪ-ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ಮಾರ್ಗದಲ್ಲಿ ಸಂಚರಿಸುವಂತೆ ಹಾಗೂ ಭಾರಿ ವಾಹನಗಳಾದ ರಾಜಹಂಸ, ಐರಾವತ ಬಸ್ಸುಗಳು, ಖಾಸಗಿ ಲಕ್ಸುರಿ ಬಸ್ಸುಗಳು, ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್ ಮತ್ತು ಲಾಂಗ್ ಚಾಸೀಸ್ ವಾಹನಗಳು ಉಡುಪಿ-ಕುಂದಾಪುರ-ಸಿದ್ಧಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

    ಕಾಮಗಾರಿ ನಡೆಯುವ ವೇಳೆ ನಿಷೇಧಿತ ಮಾರ್ಗದಲ್ಲಿ ಯಾವುದೇ ವಾಹನ ಸಂಚರಿಸದಂತೆ ಮತ್ತು ಕಾಮಗಾರಿಗೆ ಅಡಚಣೆಯಾಗದಂತೆ ಸೂಕ್ತ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವುದು, ಘಾಟಿ ರಸ್ತೆಯ ದುರಸ್ಥಿಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಸಮರೋಪಾದಿಯಲ್ಲಿ ಏಪ್ರಿಲ್ 1 ರಿಂದ ಘಾಟಿ ರಸ್ತೆಯ ದುರಸ್ಥಿ ಕಾರ್ಯವನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಪರಿಷ್ಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply