FILM
ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಗೆ ಹಠಾತ್ ಎದೆನೋವು – ಆಸ್ಪತ್ರೆಗೆ ದಾಖಲು

ಚೆನ್ನೈ ಮಾರ್ಚ್ 16: ದೇಶದ ಹೆಸರಾಂತ ಸಂಗೀತ ನಿರ್ದೇಶಕ ಆಸ್ಕರ್ ಪ್ರಶಸ್ತಿ ವಿಜೇತ ಎಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಆರ್ ರೆಹಮಾನ್ ಅವರಿಗೆ ಇಂದು ಬೆಳಿಗ್ಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಆರ್ ರೆಹಮಾನ್ ಅವರಿಗೆ ಇಸಿಜಿ ಸೇರಿದಂತೆ ಹಲವು ಬೇರೆ ಬೇರೆ ಪರೀಕ್ಷೆಗಳನ್ನು ಮಾಡಿಸಲಾಗಿದೆ. ಅವರ ಹೃದಯನಾಳದ ಕೆಲವೆಡೆ ಬ್ಲಾಕೇಜ್ಗಳು ಇರುವುದು ಪರೀಕ್ಷೆಗಳಿಂದ ತಿಳಿದುಬಂದಿದ್ದು ಮೂಲಗಳಿಂದ ತಿಳಿದು ಬಂದಿರುವ ಮಾಹಿತಿಯಂತೆ ಎಆರ್ ರೆಹಮಾನ್ ಅವರಿಗೆ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎನ್ನಲಾಗುತ್ತಿದೆ. ಇನ್ನೂ ಕೆಲ ದಿನ ಅಪೋಲೊ ಆಸ್ಪತ್ರೆಯಲ್ಲಿಯೇ ಕಳೆಯಲಿರುವ ಎಆರ್ ರೆಹಮಾನ್ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
