Connect with us

LATEST NEWS

ಉತ್ತರಪ್ರದೇಶ – ಕಾಂಗ್ರೇಸ್ ಅಭ್ಯರ್ಥಿ ಮಾಡೆಲ್ ಅರ್ಚನಾ ಗೌತಮ್ ಹೀನಾಯ ಸೋಲು

ಉತ್ತರ ಪ್ರದೇಶ : ಚುನಾವಣೆಯಲ್ಲಿ ಬಿಕಿನಿ ಗರ್ಲ್ ಎಂದೇ ಪ್ರಸಿದ್ದಿಯಾಗಿದ್ದ ನಟಿ, ಮಾಡೆಲ್ ಅರ್ಚನಾ ಗೌತಮ್ ಹೀನಾಯ ಸೋಲನ್ನು ಅನುಭವಿಸಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೀರತ್‍ನ ಹಸ್ತಿನಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇವಲ 1133 ಮತಗಳನ್ನು ಪಡೆದುಕೊಂಡಿದ್ದಾರೆ.


ಉತ್ತರ ಪ್ರದೇಶ ಚುನಾವಣೆಯ 125 ಅಭ್ಯರ್ಥಿಗಳಲ್ಲಿ ಅರ್ಚನಾ ಅವರ ಹೆಸರನ್ನು ಘೋಷಿಸಿದ ಕೂಡಲೇ, ಬಿಕಿನಿ ಧರಿಸಿರುವ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಪ್ರಾರಂಭಿಸಿದವು. ಈ ಹಿನ್ನೆಲೆಯಲ್ಲಿ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅರ್ಚನಾ, ಜನರು ನನ್ನ ರಾಜಕೀಯ ವೃತ್ತಿಜೀವನದೊಂದಿಗೆ ಮಾಡೆಲಿಂಗ್ ವೃತ್ತಿಯನ್ನು ಬೆರೆಸಬಾರದು ಎಂದು ಜನರಲ್ಲಿ ಮನವಿ ಮಾಡಿದ್ದರು.


2018ರಲ್ಲಿ ಮಿಸ್ ಉತ್ತರ ಪ್ರದೇಶ ಪ್ರಶಸ್ತಿ ವಿಜೇತೆಯಾಗಿರುವ ಅರ್ಚನಾ 2015ರಲ್ಲಿ ಗ್ರೇಟ್ ಗ್ರ್ಯಾಂಡ್ ಮಸ್ತಿ ಚಿತ್ರದ ಮೂಲಕ ಬಾಲಿವುಡ್‍ಗೆ ಪಾದಾರ್ಪಣೆ ಮಾಡಿದ್ದರು. ಅರ್ಚನಾ ಗೌತಮ್ ಮಿಸ್ ಬಿಕಿನಿ ಇಂಡಿಯಾ 2018 ಪ್ರಶಸ್ತಿಯನ್ನು ಗೆದ್ದಿದ್ದಾರೆ ಮತ್ತು ಮಿಸ್ ಕಾಸ್ಮೋಸ್ ವಲ್ರ್ಡ್ 2018ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೋಸ್ಟ್ ಟ್ಯಾಲೆಂಟ್ 2018 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ರಾಜಕೀಯದಲ್ಲಿ ತಮ್ಮ ಅದೃಷ್ಟ ಪರೀಕ್ಷೆಯಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply