Connect with us

LATEST NEWS

ದೇಶಭಕ್ತಿ ಬಗ್ಗೆ ಭಾಷಣ ಬೀಗಿಯುವ ಕರಾವಳಿ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಬಗ್ಗೆ ನಿರಾಸಕ್ತಿ…..!

ದೇಶಭಕ್ತಿ ಬಗ್ಗೆ ಭಾಷಣ ಬೀಗಿಯುವ ಕರಾವಳಿ ಜಿಲ್ಲೆಗಳಲ್ಲಿ ಸೇನಾ ನೇಮಕಾತಿ ಬಗ್ಗೆ ನಿರಾಸಕ್ತಿ…..!

ಮಂಗಳೂರು : ಭಾರತೀಯ ಸೇನೆಗೆ ಸೇರಲು ಇಚ್ಚಿಸುವ ಉತ್ಸಾಹಿ, ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ಸೇನಾ ನೇಮಕಾತಿ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನಲೆಯಲ್ಲಿ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಕರಾವಳಿ ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲಾಡಳಿತ ಕರೆ ನೀಡಿದೆ.

ಸೇನಾ ನೇಮಕಾತಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 16 ರಿಂದ ಮಾರ್ಚ್ 20 ರ ವರೆಗೆ ಅವಕಾಶವಿದ್ದು, ಇದುವರೆಗೂ 18 ಸಾವಿರ ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇದರಲ್ಲಿ ಹೊರ ಜಿಲ್ಲಾ ಅಭ್ಯರ್ಥಿಗಳ ಸಂಖ್ಯೆಯೇ ಹೆಚ್ಚಿದ್ದು, ಜಿಲ್ಲೆಯ ಯುವಕರ ಭಾಗವಹಿಸುವಿಕೆ ಕಡಿಮೆ ಇದೆ. ಸೇನೆಗೆ ಸೇರಿ ದೇಶ ಸೇವೆ ಮಾಡುವುದು ಗೌರವದ ವಿಚಾರ. ಸೇನೆಗೆ ಸೇರ್ಪಡೆಗೊಂಡ ಯುವಕರಿಗೆ ತರಬೇತಿಯ ಮೊದಲ ತಿಂಗಳಲ್ಲೇ 38 ಸಾವಿರ ರೂ. ಗಳ ವೇತನದ ಜೊತೆಗೆ ಹಲವು ರಿಯಾಯತಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಆದರೂ ಜಿಲ್ಲೆಯ ಯುವಕರಲ್ಲಿ ಸೇನೆಗೆ ಸೇರುವ ಬಗ್ಗೆ ಆಸಕ್ತಿ ಕಂಡು ಬರುವುದಿಲ್ಲ.

ಕರಾವಳಿ ಜಿಲ್ಲೆಗಳಲ್ಲಿ ದೇಶಾಭಿಮಾನದ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಯುವಕರು ಸೇನಾ ನೇಮಕಾತಿ ಬಗ್ಗೆ ಮಾತ್ರ ನಿರಾಸಕ್ತಿ ತೊರಿಸುತ್ತಿದ್ದಾರೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ತೀರಾ ಕಡಿಮೆ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಎರಡು ಜಿಲ್ಲೆಯ ಜಿಲ್ಲಾಡಳಿತ ಯುವಕರಲ್ಲಿ ನೇಮಕಾತಿಯ ಪ್ರಯೋಜನ ಪಡೆಯಲು ಮನವಿ ಮಾಡಿದೆ.

ಆನ್‍ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 20 ರ ವರೆಗೆ ಅವಕಾಶವಿರುತ್ತದೆ. ಆನ್‍ಲೈನ್ ಮೂಲಕ ನೋಂದಾಯಿಸಲ್ಪಟ್ಟ ಅಭ್ಯರ್ಥಿಗಳಿಗೆ ಮಾತ್ರ ರ್ಯಾಲಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ರ್ಯಾಲಿಯಲ್ಲಿ ಭಾಗವಹಿಸಲು ಅಡ್ಮಿಟ್ ಕಾರ್ಡ್ ಕಡ್ಡಾಯವಾಗಿದ್ದು, ಮಾರ್ಚ್ 24 ರಂದು ಕಾರ್ಡ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.

ವಯೋಮಿತಿ 17 ರಿಂದ 23 ವರ್ಷ ಒಳಗಿನ ಅವಿವಾಹಿತ ಯುವಕರಿಗೆ ಸೋಲ್ಜರ್ ಜನರಲ್ ಡ್ಯೂಟಿ (ಆಲ್ ಆಮ್ರ್ಸ್), ಸೋಲ್ಜರ್ ಟೆಕ್ನಿಕಲ್, ಸೋಲ್ಜರ್ ಟೆಕ್ ನರ್ಸಿಂಗ್ ಅಸಿಸ್ಟೆಂಟ್/ ನರ್ಸಿಂಗ್ ಸಹಾಯಕ ಪಶುವೈದ್ಯ, ಸೋಲ್ಜರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ (ಆಲ್ ಆಮ್ರ್ಸ್), 10 ನೇ ತರಗತಿ ಪಾಸ್ ಆದವರಿಗೆ ಸೋಲ್ಜರ್ ಟ್ರೇಡ್ಸ್ಮನ್ (ಆಲ್ ಆಮ್ರ್ಸ್), ಮತ್ತು 8 ನೇ ತರಗತಿ ಪಾಸ್ ಆದವರಿಗೆ ಸೋಲ್ಜರ್ ಟೇಡ್ನ್ಮನ್ (ಆಲ್ ಆಮ್ರ್ಸ್) ಹುದ್ದೆಗಳು ಲಭ್ಯವಿದ್ದು ಆನ್‍ಲೈನ್ ಮೂಲಕ http://www.joinindianarmy.nic.in/ ಹೆಸರು ನೋಂದಾಯಿಸಬಹುದಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *