LATEST NEWS
ಅರ್ನಬ್ ಗೋಸ್ವಾಮಿಗೆ 14 ದಿನಗಳ ನ್ಯಾಯಾಂಗ ಬಂಧನ

ರಾಯಗಢ, ನವೆಂಬರ್ 05: ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಅಲಿಬಾಗ್ ಜ್ಯೂಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ತೀರ್ಪು ಪ್ರಕಟಿಸಿದೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಬುಧವಾರ ಮುಂಜಾನೆ ಮುಂಬೈ ಪೊಲೀಸರು ಹಠಾತ್ತನೇ ದಾಳಿ ನಡೆಸಿ ಅರ್ನಬ್‌ರನ್ನು ಬಂಧಿಸಿದ್ದರು.

ಮಹಾರಾಷ್ಟ್ರ ಪೊಲೀಸರು ಬುಧವಾರ ರಾತ್ರಿ ನ್ಯಾಯಾಲಯದ ಮುಂದೆ ಅರ್ನಾಬ್ ಗೋಸ್ವಾಮಿ ಸೇರಿದಂತೆ ಎಲ್ಲಾ ಮೂವರು ಆರೋಪಿಗಳನ್ನು ಹಾಜರುಪಡಿಸಿದ್ದು ನ್ಯಾಯಾಲಯ ಗೋಸ್ವಾಮಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ತೀರ್ಪು ನೀಡಿದೆ.
ಇನ್ನು ಅರ್ನಬ್ ಗೋಸ್ವಾಮಿ ಪರ ವಕೀಲರು ಗುರುವಾರ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.