Connect with us

LATEST NEWS

ಕೊರೊನಾದಿಂದ ಮೃತಪಟ್ಟ ಮಹಿಳೆ ಅಂತ್ಯ ಸಂಸ್ಕಾರಕ್ಕೆ ತಡೆಯೊಡ್ಡಿದ ಶಾಸಕರನ್ನು ಬಂಧಿಸಿ – ಪರಿಷತ್ ಸದಸ್ಯ ಹರೀಶ್ ಕುಮಾರ್

ಕೊರೊನಾದಿಂದ ಮೃತಪಟ್ಟ ಮಹಿಳೆ ಅಂತ್ಯ ಸಂಸ್ಕಾರಕ್ಕೆ ತಡೆಯೊಡ್ಡಿದ ಶಾಸಕರನ್ನು ಬಂಧಿಸಿ – ಪರಿಷತ್ ಸದಸ್ಯ ಹರೀಶ್ ಕುಮಾರ್

ಮಂಗಳೂರು ಎಪ್ರಿಲ್ 24: ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರಕ್ಕೆ ತಡೆಯೊಡ್ಡಿದ್ದ ಶಾಸಕರನ್ನು ಈ ಕೂಡಲೇ ಬಂಧಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಮಹಿಳೆ ಅಂತ್ಯ ಸಂಸ್ಕಾರದಲ್ಲಿ ಉದ್ದೇಶಪೂರ್ವಕವಾಗಿ ಬೇಜವಾಬ್ದಾರಿಯಿಂದ ಶಾಸಕರೇ ಮುಂದೆ ನಿಂತು ಅಂತ್ಯಕ್ರಿಯೆ ಮಾಡುವುದನ್ನು ತಡೆದಿದ್ದಾರೆ. ಇದು ಬಹಳ ಬೇಸರದ ವಿಚಾರವಾಗಿದೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇದೇ ರೀತಿಯಲ್ಲಿ ಮುಂದುವರೆದರೆ ನಾವು ಕೊರೊನಾ ವಿರುದ್ಧ ಹೋರಾಡುವುದು ಹೇಗೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ವೈದ್ಯಕೀಯ ಸಿಬ್ಬಂದಿಗೆ ತರಿಸಿರುವ ಕಿಟ್​ಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *