ಮಂಗಳೂರು, ಮೇ 15: ಮಂಗಳೂರು ಹೊರವಲಯದ ತೊಕ್ಕೊಟ್ಟಿನಲ್ಲಿ  ಅನ್ಯಕೋಮಿನ ಉದ್ಯಮಿಯೋರ್ವ  ಹಿಂದೂ ದೇವರನ್ನು ನಿಂದಿಸಿದ ಘಟನೆ ನಡೆದಿದೆ.

ಉದ್ಯಮಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು (45) ಸ್ವಾಲಿಝ್ ಇಕ್ಬಾಲ್ ಎಂದು ಗುರುತಿಸಲಾಗಿದೆ.

ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದರಿಂದ ಆಕ್ರೋಶಗೊಂಡ ಹಿಂದೂ ಸಂಘಟಕರು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಉಳ್ಳಾಲ ಠಾಣೆಯಲ್ಲೂ ದೂರು ದಾಖಲಾಗಿದ್ದು, ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share Information