ಬೆಳ್ತಂಗಡಿ ಡಿಸೆಂಬರ್ 30: ದ್ವೇಷ ಭಾಷಣ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ.


ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್‌ ಎಂಬುವರು ನೀಡಿದ್ದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 353 (2) ಅಡಿ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ತಿಮರೋಡಿ ಗೈರಾಗಿದ್ದರು ಎಂದು ಮೂಲಗಳು ತಿಳಿಸಿವೆ.
ತಿಮರೋಡಿ ವಿರುದ್ಧ ಗಡಿಪಾರು ಆದೇಶವನ್ನೂ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದಾರೆ. ತಿಮರೋಡಿ ತಲೆಮರೆಸಿಕೊಂಡಿದ್ದು, ಗಡಿಪಾರು ಆದೇಶ ಜಾರಿ ಮಾಡಲು ಪೊಲೀಸರು ಹುಡುಕುತ್ತಿದ್ದಾರೆ.

Share Information