DAKSHINA KANNADA
ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಪುತ್ತೂರು ಮಾರ್ಚ್ 17: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಮೊದಲ ಬೇಟಿ ನೀಡಿದ್ದಾರೆ.
ನಿನ್ನೆ ಮಂಗಳೂರಿನಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿತು. ಈ ಹಿನ್ನಲೆ ಇಂದು ಅರುಣ್ ಕುಮಾರ್ ಪುತ್ತಿಲ ತಮ್ಮ ಬೆಂಬಲಿಗರೊಂದಿಗೆ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು.

ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು. ಬಿಜೆಪಿ ಕಚೇರಿಗೆ ಭೇಟಿ ಕೊಡುವ ಮೊದಲು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ವಿಶೇಷ ಪ್ರಾರ್ಥನೆ ಮಾಡಿ ತೆರಳಿದರು.