DAKSHINA KANNADA
ಬಿಜೆಪಿಯಿಂದ ಬಂಡಾಯ ಎದ್ದು ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ…!!

ಪುತ್ತೂರು ಎಪ್ರಿಲ್ 17: ಪುತ್ತೂರು ವಿಧಾನಸಭಾ ಕೇತ್ರದಿಂದ ಟಿಕೆಟ್ ವಂಚಿತರಾಗಿದ್ದ ಹಿಂದೂ ಸಂಘಟನೆ ಮುಖಂಡ ಅರುಣ್ ಪುತ್ತಿಲ ಎಂದು ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಪುತ್ತೂರಿನ ದರ್ಬೆಯಿಂದ ಮಿನಿ ವಿಧಾನಸೌಧದ ವರೆಗೆ ಮೆರವಣಿಗೆಯ ಮೂಲಕ ತೆರಳಿದ ಅರುಣ್ ಪುತ್ತಿಲ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು.