DAKSHINA KANNADA
ದಕ್ಷಿಣಕನ್ನಡ ಲೋಕಸಭೆಗೆ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ…!!
ಪುತ್ತೂರು ಫೆಬ್ರವರಿ 29: ದಕ್ಷಿಣಕನ್ನಡದಲ್ಲಿ ಬಿಜೆಪಿಗೆ ತಲೆನೋವಾಗಿದ್ದ ಪುತ್ತಿಲ ಪರಿವಾರದ ವಿವಾದ ಇದೀಗ ಅಂತ್ಯಕ್ಕೆ ಬಂದಿದ್ದು, ಬಿಜೆಪಿ ನಾಯಕರೊಂದಿಗೆ ನಡೆದಿದ್ದು ಮಾತುಕತೆ ವಿಫಲಗೊಂಡ ಹಿನ್ನಲೆ ಇದೀಗ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ ಮಾಡುತ್ತಾರೆ ಎಂದು ಪುತ್ತಿಲ ಪರಿವಾರ ಘೋಷಿಸಿದೆ.
ಇಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ನಡೆದ ಸುದ್ದಿಗೋಷ್ಟಿ ಮಾತನಾಡಿದ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತಾ ಅರುಣ್ ಕುಮಾರ್ ಪುತ್ತಿಲ ದಕ್ಷಿಣಕನ್ನಡ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಾರೆ ಎಂದರು.
ಬಿಜೆಪಿ ಸೇರ್ಪಡೆಗೆ ಕುರಿತಂತೆ ಹಲವು ಸುತ್ತಿನ ಮಾತುಕತೆ ನಡೆದಿತ್ತು, ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರನ್ನು ಪುತ್ತಿಲ ಬೇಟಿಯಾಗಿದ್ದರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಹಲವು ಬೇಡಿಕೆ ಇಟ್ಟಿದ್ದ ಪುತ್ತಿಲ ಪರಿವಾರ ಇಟ್ಟಿತ್ತು, ಆದರೆ ಬಿಜೆಪಿ ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಯಾಗ ಬೇಕೆಂದು ಸೂಚಿಸಿದ್ದರು. ಈ ಹಿನ್ನಲೆ ಮಾತುಕತೆ ವಿಫಲವಾಗಿದ್ದು. ಪುತ್ತಿಲ ಪರಿವಾರದ ಷರತ್ತಿಗೆ ಯಾವುದೇ ಮಾನ್ಯತೆ ನೀಡದ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧೆಗೆ ಪುತ್ತಿಲಪರಿವಾರ ನಿರ್ಧರಿಸಿದೆ.