Connect with us

LATEST NEWS

ಕಿರಿಕ್ ನಂತರ – ನಟಿ ಸಂಯುಕ್ತಾ ಹೆಗಡೆ ಕ್ಷಮೆ ಕೇಳಿದ ಕಾಂಗ್ರೇಸ್ ಮುಖಂಡೆ ಕವಿತಾ ರೆಡ್ಡಿ

ಬೆಂಗಳೂರು ಸೆಪ್ಟೆಂಬರ್ 7: ಸರ್ಜಾಪುರದ ಪಾರ್ಕ ಒಂದರಲ್ಲಿ ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗಡೆ ಜೊತೆ ಕಿರಿಕ್ ನಂತರ ನಡೆದ ವಿರೋಧಗಳ ಹಿನ್ನಲೆ ಕಾಂಗ್ರೇಸ್ ನಾಯಕಿ ಕವಿತಾ ರೆಡ್ಡಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ ಕ್ಷಮೆ ಕೇಳಿದ್ದಾರೆ.


ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ‘ನೈತಿಕ ಪೊಲೀಸ್‌ಗಿರಿಯನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ಜವಾಬ್ದಾರಿಯತ ನಾಗರಿಕಳಾಗಿ ಮತ್ತು ಪ್ರಗತಿಪರ ಮಹಿಳೆಯಾಗಿ ಈ ವಿಷಯದಲ್ಲಿ ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರ ಬಳಿ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.  ಈ ಘಟನೆ ನಡೆಯಬಾರದಿತ್ತು. ನಾನು ಸಂಯುಕ್ತಾ ಅವರ ಗೆಳೆತಿಯರ ಮೇಲೆ ಹಲ್ಲೆ ಮಾಡಲಿಲ್ಲ. ನಾನು ನನ್ನ ಸಂಯಮ ಕಳೆದುಕೊಂಡು ವರ್ತಿಸಿದ್ದು ಸರಿಯಲ್ಲ. ನಾನು ಸದಾ ನೈತಿಕ ಪೊಲೀಸ್​ ಗಿರಿಯನ್ನು ವಿರೋಧಿಸಿದ್ದೇನೆ. ಅಂದು ಆಕ್ರಮಣಕಾರಿಯಾಗಿ ವರ್ತಿಸಿದ್ದು, ಅಲ್ಲಿ ನೆರೆದಿದ್ದ ಎಲ್ಲರ ಬಳಿಯೂ ಕ್ಷಮೆ ಯಾಚಿಸುತ್ತಿದ್ದೇನೆ ಎಂದಿದ್ದಾರೆ ಕವಿತಾ ರೆಡ್ಡಿ.


ಸಂಯುಕ್ತಾ ಹೆಗಡೆ ಮತ್ತು ಅವರ ಗೆಳತಿಯರು ಉದ್ಯಾನದಲ್ಲಿ ಶುಕ್ರವಾರ ಸಂಜೆ ಹಾಡು ಹಾಡುತ್ತಿದ್ದ ವೇಳೆ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕವಿತಾ ರೆಡ್ಡಿ ವಾಗ್ವಾದ ನಡೆಸಿದ್ದರು. ಕಾಂಗ್ರೆಸ್‌ ಪಕ್ಷದಲ್ಲಿ ಕವಿತಾ ಸಕ್ರಿಯವಾಗಿದ್ದಾರೆ. ಕವಿತಾ ಅವರ ನಡೆಯನ್ನು ಬಿಜೆಪಿ ವಿರೋಧಿಸಿದ್ದರಿಂದ, ಈ ಘಟನೆ ಸ್ಥಳೀಯವಾಗಿ ರಾಜಕೀಯ ಸಂಘರ್ಷಕ್ಕೂ ಕಾರಣವಾಗಿತ್ತು.

ಈ ಘಟನೆ ನಡೆಯುತ್ತಿದ್ದಂತೆಯೇ ಕಿರಿಕ್​ ಪಾರ್ಟಿ ಖ್ಯಾತಿಯ ನಟಿ ಸಂಯುಕ್ತಾ ಹೆಗಡೆ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಅಲ್ಲಿ ಅವರ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ಕುರಿತಾಗಿ ತಮ್ಮ ಅಳಲು ತೋಡಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವುದರೊಂದಿಗೆ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿರುವ ಕವಿತಾ ರೆಡ್ಡಿ ಅವರ ವರ್ತನೆಗೆ ವಿರೋಧ ವ್ಯಕ್ತವಾಗಿತ್ತು.

Video:

Facebook Comments

comments