Connect with us

    LATEST NEWS

    ಅಸಾನಿ ಚಂಡಮಾರುತ – ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ ಸಾಧ್ಯತೆ

    ಮಂಗಳೂರು ಮಾರ್ಚ್ 19: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ವರ್ಷದ ಮೊದಲ ಚಂಡಮಾರುತವೇಳುವ ಸಾಧ್ಯತೆ ಇದ್ದು. ಈ ಹಿನ್ನಲೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


    ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳನ್ನ ಹೊರತುಪಡಿಸಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ಮಾರ್ಚ್ 20 ರಂದು ದಾವಣಗೆರೆ, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. 20, 21 ರಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡಿನ ಕೊಪ್ಪಳ,ರಾಯಚೂರು, ಕಲಬುರಗಿ, ಯಾದಗಿರಿಯಲ್ಲಿ 20, 21 ರಂದು ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇನ್ನು ಕರಾವಳಿಯಲ್ಲಿ ಬೆಳಿಗ್ಗೆಯಿಂದಲೇ ಮೊಡ ಕವಿದ ವಾತಾವರಣವಿದೆ.

    Share Information
    Advertisement
    Click to comment

    You must be logged in to post a comment Login

    Leave a Reply