LATEST NEWS
ಅಸಾನಿ ಚಂಡಮಾರುತ ಪ್ರಭಾವ – ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ
ಮಂಗಳೂರು ಮಾರ್ಚ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾಗಿರುವ ಚಂಡಮಾರುತ ಅಸಾನಿ ಪ್ರಭಾವಕ್ಕೆ ಮಾರ್ಚ್ 20 ರಿಂದ ಮಾರ್ಚ್ 24ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ್ ನಲ್ಲಿಯೂ ಮಳೆಯಾಗುವ ನಿರೀಕ್ಷೆಯಿರುವುದಾಗಿ ತಿಳಿಸಿದೆ.