Connect with us

DAKSHINA KANNADA

ಆಶಾ ಕಾರ್ಯಕರ್ತೆಗೆ ದುಷ್ಕರ್ಮಿಯಿಂದ ಹಲ್ಲೆ

ಬಂಟ್ವಾಳ ಜುಲೈ 9: ಕರ್ತವ್ಯ ನಿರತ ಆಶಾ ಕಾರ್ಯಕರ್ತೆಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ನಡೆದಿದೆ.

ಹಲ್ಲೆಗೊಳಗಾದ ಕಾರ್ಯಕರ್ತೆಯನ್ನು ಮಮತಾ ಗಟ್ಟಿ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆ ಮಮತ ಗಟ್ಟಿ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗ್ಗೆ ಸುಮಾರು 10 ಗಂಟೆಗೆ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದು, ಮಮತಾ ಗಟ್ಟಿಯವರ ತಲೆ, ಕೈಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Facebook Comments

comments