Connect with us

  LATEST NEWS

  ರಾಜ್ಯದಲ್ಲಿ ಲೋಕಸಭೆಯ ಎಲ್ಲ 28 ಸೀಟ್‌ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಇರಲ್ಲ: ಅಶೋಕ್‌

  ಮಂಗಳೂರು ಜನವರಿ 30: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸೀಟ್‌ಗಳನ್ನು ಬಿಜೆಪಿ ಗೆದ್ದರೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಒಂದು ತಿಂಗಳೊಳಗೆ ಉರುಳಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ.


  ಮಂಗಳೂರಿನಲ್ಲಿ ದ.ಕ. ಬಿಜೆಪಿ ನೂತನ ಅಧ್ಯಕ್ಷ ಸತೀಶ್‌ ಕುಂಪಲ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಕಾಲಿಟ್ಟ ಕಡೆಯಲ್ಲೆಲ್ಲ ಕಾಂಗ್ರೆಸ್‌ ಸೋತಿದೆ, ಮುಂದೆಯೂ ಸೋಲಲಿದೆ. ಪ್ರಸ್ತುತ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ಪೂರಕ ವಾತಾವರಣ ಇದೆ. ಎಲ್ಲ 28 ಕ್ಷೇತ್ರಗಳನ್ನು ಬಿಜೆಪಿ ಗೆದ್ದರೆ ಕಾಂಗ್ರೆಸ್‌ ಶಾಸಕರು ನಾಚಿಕೆಯಿಂದ ಆ ದರಿದ್ರ ಪಕ್ಷ ಬಿಟ್ಟು ಹೋಗಲಿದ್ದಾರೆ, ಒಂದು ತಿಂಗಳೂ ಕೂಡ ರಾಜ್ಯ ಸರ್ಕಾರ ಉಳಿಯಲ್ಲ ಎಂದರು.

  ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಅವರು, ಕೋಮುವಾದ ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಎಂದರೆ ಕೋಮುವಾದ ಎಂದು ಟೀಕಿಸಿದರು. ಇದೀಗ ರಾಮ ಮಂದಿರ ಉದ್ಘಾಟನೆ ಮೂಲಕ ಇಡೀ ದೇಶ ರಾಮಮಯವಾಗಿದೆ. ಮೋದಿ ಮತ್ತೆ ಪ್ರಧಾನಿ ಆಗಬೇಕಂತ ಇಡೀ ದೇಶ ಮಾತನಾಡ್ತಿದೆ. ಅದು ಸಾಕಾರವಾಗಲಿದೆ ಎಂದರು.

  Share Information
  Advertisement
  Click to comment

  You must be logged in to post a comment Login

  Leave a Reply