Connect with us

    DAKSHINA KANNADA

    ಪುತ್ತೂರಿನಲ್ಲಿ ಅಶೋಕ್‌ ರೈ, ಬೆಳ್ತಂಗಡಿಯಲ್ಲಿ ಹರೀಶ್‌ ಪೂಂಜಾ, ಉಳ್ಳಾಲದಲ್ಲಿ UT ಖಾದರ್ ಮುನ್ನಡೆ

    ಮಂಗಳೂರು, ಮೇ 13: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಇದ್ದು, ಬಿಜೆಪಿ ಯ ಆಶಾ ತಿಮ್ಮಪ್ಪ ಗೌಡ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

    ಮಂಗಳೂರು ಕ್ಷೇತ್ರ ದ ಕಾಂಗ್ರೆಸ್ ಅಭ್ಯರ್ಥಿ ಯು ಟಿ ಖಾದರ್ 4000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಬಿಜೆಪಿಯ ಸತೀಶ್‌ ಕುಂಪಲ ಮೂರನೇ ಸ್ಥಾನದಲ್ಲಿ ಎಸ್‌ಡಿಪಿಐನ ರಿಯಾಝ್‌ ಫರಂಗಿಪೇಟೆ ಇದ್ದಾರೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾಗೆ 954 ಮತಗಳ ಮುನ್ನಡೆಯಲ್ಲಿದ್ದು, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಎರಡನೇ ಸ್ಥಾನದಲ್ಲಿದ್ದಾರೆ.

    ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ 1118 ಮತಗಳ ಮುನ್ನಡೆಯಲ್ಲಿದ್ದು, ಕಾಂಗ್ರೆಸ್‌ ಅಭ್ಯರ್ಥಿ ರಮಾನಾಥ್‌ ರೈ ಎರಡನೇ ಸ್ಥಾನದಲ್ಲಿದ್ದಾರೆ. ಸುಳ್ಯದಲ್ಲಿ ಬಿಜೆಪಿಯ ಅಭ್ಯರ್ಥಿ ಭಾಗೀರಥಿ ಮುರುಳ್ಯ 1000 ಮತಗಳ ಮುನ್ನಡೆಯಲ್ಲಿದ್ದಾರೆ.

    ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಜೆ.ಆರ್‌ ಲೋಬೋ ಎರಡನೇ ಸ್ಥಾನದಲ್ಲಿದ್ದಾರೆ. ಮಂಗಳೂರು ಉತ್ತರದಲ್ಲಿ ಬಿಜೆಪಿಯ ಭರತ್ ಶೆಟ್ಟಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಎರಡನೇ ಸ್ಥಾನದಲ್ಲಿದ್ದು, ಜೆಡಿಎಸ್‌ನ ಮೊಯ್ದೀನ್‌ ಬಾವ ಮೂರನೇ ಸ್ಥಾನದಲ್ಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply