LATEST NEWS
ಕ್ರೀಡೆಯಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ : ಸಚಿವ ಡಾ. ಅಶ್ವಥ್ ನಾರಾಯಣ
ಉಡುಪಿ, ನವೆಂಬರ್ 26 : ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಎಲ್ಲಾ ರೀತಿಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು.
ಅವರು ಇಂದು ಕೋಟ ವಿವೇಕ ಹೈಸ್ಕೂಲ್ ಆವರಣದಲ್ಲಿ, ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಕೋಟ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಹೊಳಪು-2022 ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್‍ರಾಜ್ ಮತ್ತು ನಗರ ಸ್ಥಳಿಯಾಡಳಿತ ಪ್ರತಿನಿಧಿಗಳ ಕ್ರೀಡೋತ್ಸವ ಹಾಗೂ ಸಾಂಸ್ಕøತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೆ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದಾಗಿದೆ. ನಿರಂತರ ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ
ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು ಎಂದರು.