Connect with us

LATEST NEWS

ಗಂಡ ಮತ್ತು ಅತ್ತೆಯನ್ನು ಕೊಂದು ಫ್ರಿಡ್ಜ್ ನಲ್ಲಿಟ್ಟ ಮಹಿಳೆ….!!

ಗುವಾಹಟಿ ಫೆಬ್ರವರಿ 21: ತನ್ನ ಗಂಡ ಮತ್ತು ಅತ್ತೆಯನ್ನು ಕೊಂದು ಅವರ ದೇಹಗಳನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ ಭಯಾನಕ ಘಟನೆ ಅಸ್ಸಾಂನ ನೂನ್‌ಮತಿಯಲ್ಲಿ ಬೆಳಕಿಗೆ ಬಂದಿದೆ.


ಕೊಲೆ ಮಾಡಿದ ಆರೋಪಿಯನ್ನು ವಂದನಾ ಕಲಿತಾ ಎಂದು ಗುರುತಿಸಲಾಗಿದ್ದು, ಈಕೆ ವಿವಾಹೇತರ ಸಂಬಂಧ ಹೊಂದಿದ್ದಳು. ಪತಿ ಅಮರಜ್ಯೋತಿ ಡೇ ಮತ್ತು ಅತ್ತೆ ಶಂಕರಿ ಡೇ ಅವರನ್ನು ಹತ್ಯೆ ಮಾಡಿ ಮೂರು ದಿನಗಳ ನಂತರ ತನ್ನ ಪ್ರಿಯಕರನೊಂದಿಗೆ ಸೇರಿ, ಇಬ್ಬರ ದೇಹಗಳ ಭಾಗಗಳನ್ನು ಬೇರೆಡೆಗೆ ಸಾಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


ಗುವಾಹಟಿಯಿಂದ 150 ಕಿಮೀ ದೂರದಲ್ಲಿರುವ ಮೇಘಾಲಯ ರಾಜ್ಯದ ಚಿರಾಪುಂಜಿಗೆ ಕೊಂಡೊಯ್ದಿದ್ದರು. ಅಲ್ಲಿ ದೇಹದ ಭಾಗಗಳನ್ನು ಎಸೆದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಂದನಾ ತನ್ನ ಪತಿ ಹಾಗೂ ಅತ್ತೆಯನ್ನು ಹತ್ಯೆ ಮಾಡಿದ್ದಾಳೆ. ನಂತರ ಅವರ ದೇಹಗಳನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಳು. ಪ್ರಿಯಕರನೊಂದಿಗೆ ಸೇರಿಕೊಂಡು ದೇಹದ ಭಾಗಗಳನ್ನು ಬೇರೆಡೆಗೆ ಸಾಗಿಸಿ ಎಸೆದಿದ್ದಳು. ಈ ಪ್ರಕರಣವನ್ನು ನಮ್ಮ ಪೊಲೀಸ್‌ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದಾರೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

Advertisement
Click to comment

You must be logged in to post a comment Login

Leave a Reply