LATEST NEWS
ಕೊರೊನಾಗೆ ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಲಿ

ಉಡುಪಿ ಜೂನ್ 07: ಉಡುಪಿ ಜಿಲ್ಲೆಯ ಕೊರೊನಾ ಮಹಾಮಾರಿ ಪ್ರವಾಸೋಧ್ಯಮ ಇಲಾಖೆಯ ಸಹಾಯ ನಿರ್ದೇಶಕರೊಬ್ಬರನ್ನು ಬಲಿ ತೆಗೆದುಕೊಂಡಿದೆ. ಉಡುಪಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿರುವ ಸೋಮಶೇಖರ್ ಬನವಾಸಿ (49) ಅವರು ಇಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಇವರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ನಂತರ 2020 ರಲ್ಲಿ ಉಡುಪಿ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದರು. ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಶ್ರಮಿಸಿದ್ದ ಸೋಮಶೇಖರ್ ಅವರು ಪಡುಬಿದ್ರೆ ಬೀಚ್ ಬ್ಲೂ ಪ್ಲಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಸಾಕಷ್ಟು ಶ್ರಮಿಸಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಸರಕಾರಿ ಕೆಲಸಕ್ಕೆ ಸೇರುವ ಮುನ್ನ ಇವರು ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು.

ಇನ್ನು ಸೋಮಶೇಖರ್ ಅವರ ನಿಧನಕ್ಕೆ ಉಡುಪಿ ಜಿಲ್ಲಾಡಳಿ ಸಂತಾಪ ಸೂಚಿಸಿದ್ದು, ಅತ್ಯಂತ ನಿಷ್ಠೆಯ ಸಹೋದ್ಯೋಗಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಸೋಮಶೇಖರ್ ಅವರನ್ನು ಕಳೆದುಕೊಂಡು ಹೃದಯ ಭಾರವಾಗಿದೆ ಇವರ ಆತ್ಮಕ್ಕೆ ಭಗವಂತ ಶಾಂತಿಯನ್ನು ಕರುಣಿಸಲಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸಂತಾಪ ಸೂಚಿಸಿದ್ದಾರೆ.