ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನ ಸೆರೆ

ಮಂಗಳೂರು ಡಿಸೆಂಬರ್ 20: ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ಹೊಂದಿದ ಆರೋಪದ ಮೇಲೆ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಹೇಮಂತ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿ ಸಹಚರ ಎಂದು ಹೇಳಲಾಗಿದೆ.

ಅಕ್ರಮವಾಗಿ ಪಿಸ್ತೂಲ್ ಹಾಗೂ ಇತರ ಮಾರಕಾಯುಧಗಳನ್ನು ಹೊಂದಿದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನನ್ನು ವಶಕ್ಕೆ ಪಡೆದುಕೊಂಡು ಪಿಸ್ತೂಲ್, ತಲವಾರು ಹಾಗೂ ಇತರ ಮಾರಕಾಯುಧಗಳನ್ನು ವಶಪಡಿಸಿಕೊಂಡಿರುತ್ತಾರೆ.

ಬಂಧಿತ ಆರೋಪಿ ಹೇಮಂತ್ ಕುಮಾರ್ ಮಂಗಳೂರು ನಗರದ ಹೊಯಿಗೆ ಬಝಾರ್ ಪರಿಸರದಲ್ಲಿ ನಡೆದ ಅನೀಷ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯಾಗಿದ್ದು, ಈ ನಡುವೆ ಯಾವುದೋ ಕೃತ್ಯ ನಡೆಸುವ ಉದ್ದೇಶದಿಂದ ತನ್ನ ವಶದಲ್ಲಿ ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳು, ತಲವಾರುಗಳನ್ನು ಇಟ್ಟುಕೊಂಡಿದ್ದಾನೆ ಎಂಬ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ ಒಂದು ಪಿಸ್ತೂಲ್ ಹಾಗೂ 4 ಸಜೀವ ಮದ್ದುಗುಂಡುಗಳು, 2 ತಲವಾರುಗಳು, ಚೂರಿ, ಬೇಸ್ ಬಾಲ್ ಸ್ಟಿಕ್ ಹಾಗೂ ಎರಡು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಪಿಸ್ತೂಲ್ ನ ಮೌಲ್ಯ ರೂ. 1 ಲಕ್ಷ ಆಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,12,750/- ಆಗಿರುತ್ತದೆ. ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ವಿಶ್ವನಾಥ ಕೊರಗ ಶೆಟ್ಟಿಯ ಸಹಚರನಾಗಿದ್ದಾನೆ.

3 Shares

Facebook Comments

comments