Connect with us

    LATEST NEWS

    ಲಖನೌ – ಭೀಕರ ರಸ್ತೆ ಅಪಘಾತ 18 ಮಂದಿ ಸಾವು

    ಲಖನೌ ಜುಲೈ 10 : ಹಾಲಿನ ಟ್ಯಾಂಕರ್ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಜನ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಉನ್ನಾವ್‌ ಜಿಲ್ಲೆಯ ಆಗ್ರಾ–ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ಬೆಹ್ತಾ ಮುಜಾವರ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಡಬಲ್ ಡೆಕ್ಕರ್ ಬಸ್ ಎದುರಿನಿಂದ ಬರುತ್ತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಜರುಗಿದೆ. ಘಟನೆಯಲ್ಲಿ 18 ಜನರು ಸಾವನ್ನಪ್ಪಿದು 19 ಜನರು ಗಾಯಗೊಂಡಿದ್ದಾರೆ.

    ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇವರ ಪೈಕಿ ಹಲವರು ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿ ಅರವಿಂದ್‌ ಕುಮಾರ್‌ ತಿಳಿಸಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply