LATEST NEWS
ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ – ನಾಲ್ವರು ಸಾವು

ಕೋಝಿಕ್ಕೋಡ್ ಮೇ 03: ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರ ಸಂಜೆ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಯುಪಿಎಸ್ ಕೊಠಡಿಯಿಂದ ಈ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಆಸ್ಪತ್ರೆಯಲ್ಲಿದ್ದ 200ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಟಿ ಸಿದ್ದೀಕ್, ವಯನಾಡಿನ ಕಲ್ಪೆಟ್ಟ ಮೆಪ್ಪಾಡಿ ಮೂಲದ ನಜೀರಾ (44) ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಬೆಂಕಿ ಕಾಣಿಸಿಕೊಂಡ ಬೆನಲ್ಲೆ ಅವರನ್ನು ವೆಂಟಿಲೇಟರ್ ನಿಂದ ಸ್ಥಳಾಂತರಿಸುವ ವೇಳೆ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದ ಬಗ್ಗೆ ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ವೀಣಾ ಜಾರ್ಜ್ ತಕ್ಷಣ ತನಿಖೆಗೆ ಆದೇಶಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ತನಿಖೆ ನಡೆಸಲಿದ್ದಾರೆ.