ಇಸ್ಲಾಮಾಬಾದ್ ಮಾರ್ಚ್ 01: ಖಮೇನಿ ಹತ್ಯೆಯನ್ನು ಖಂಡಿಸಿ ಪಾಕಿಸ್ತಾನದಲ್ಲಿ ಭಾರಿ ಪ್ರತಿಭಟನೆಗಳು ಭುಗಿಲೆದ್ದಿವೆ. ವಿವಿಧ ನಗರಗಳಲ್ಲಿ ನಡೆದ ಪ್ರತಿಭಟನೆಗಳು ಕೆಲವೆಡೆ ಹಿಂಸಾತ್ಮಕ ತಿರುವು ಪಡೆದಿದ್ದು, ಪ್ರತಿಭಟನಾಕಾರರು ಕರಾಚಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯ ಮೇಲೆ ದಾಳಿ ನಡೆಸಿ ಆಸ್ತಿ ಹಾನಿ ಮಾಡಿರುವುದಾಗಿ ವರದಿಯಾಗಿದೆ.

ಅಮೆರಿಕ ರಾಯಭಾರಿ ಕಚೇರಿಗೆ ದಾಳಿ

ಪ್ರತಿಭಟನೆಯ ಸಂದರ್ಭದಲ್ಲಿ ಕರಾಚಿಯಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಆವರಣದಲ್ಲಿ ಆಸ್ತಿ ಹಾನಿ ಸಂಭವಿಸಿದೆ ಎನ್ನಲಾಗಿದೆ. ಭದ್ರತಾ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ತಕ್ಷಣ ಕ್ರಮ ಕೈಗೊಂಡಿವೆ. ಟಿಯರ್ ಗ್ಯಾಸ್ ಮತ್ತು ಲಾಠಿಚಾರ್ಜ್ ಮೂಲಕ ಜನರನ್ನು ಚದುರಿಸಲು ಪ್ರಯತ್ನಿಸಲಾಗಿದೆ.

8 ಮಂದಿ ಸಾವು, 20ಕ್ಕೂ ಹೆಚ್ಚು ಗಾಯ

ನಡೆದ ಹಿಂಸಾಚಾರದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಘರ್ಷವನ್ನು ನಿಯಂತ್ರಿಸಲು ಭದ್ರತಾ ಪಡೆಗಳು teargas ಮತ್ತು ಲಾಠಿಚಾರ್ಜ್ ನಡೆಸಿದರೆಂಬ ಮಾಹಿತಿ ಲಭ್ಯವಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ, ಹಲವು ಪ್ರದೇಶಗಳಲ್ಲಿ ಉದ್ವಿಗ್ನತೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸರ್ಕಾರ ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.

Share Information