Connect with us

BELTHANGADI

ಕೊಕ್ಕಡ – ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಹಲ್ಲೆ

ಬೆಳ್ತಂಗಡಿ ಸೆಪ್ಟೆಂಬರ್ 23: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.


ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್ ಕಟ್ಟದ ಕಾರಣ ಲೈನ್ ಮ್ಯಾನ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಈ ಹಿನ್ನಲೆ ಗೂಡ್ಸ್ ಲಾರಿ ಚಾಲಕರಾಗಿರುವ ರಿಜೀಶ್ ಫೋನಿನಲ್ಲಿ ಪವರ್ ಮ್ಯಾನ್ ಉಮೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 22ರಂದು ದಿ. ಕಾಂತು ಪೂಜಾರಿಯವರ ಮನೆಯವರು ವಿದ್ಯುತ್ ಶುಲ್ಕ ಪಾವತಿಸಿ, ಮರು ಸಂಪರ್ಕವನ್ನು ನೀಡುವಂತೆ ಆದೇಶವನ್ನು ಮೆಸ್ಕಾಂ ಕಚೇರಿಗೆ ತಲುಪಿಸಿದ್ದಾರೆ. ಆ ಪ್ರಕಾರ ಪವರ್ ಮ್ಯಾನ್ ಉಮೇಶ್ ರವರು ದಿ.ಕಾಂತು ಪೂಜಾರಿ ಅವರ ಮನೆಗೆ ಮರು ಸಂಪರ್ಕವನ್ನು ನೀಡಿ ಬಂದಿದ್ದಾರೆ.


ಗುರುವಾರ ಸಂಜೆ ಕರ್ತವ್ಯ ಮುಗಿಸಿ ರಾತ್ರಿ ಕೊಕ್ಕಡ ಜಂಕ್ಷನ್ ನಲ್ಲಿ ಉಮೇಶ್ ಹಾಗೂ ಅವರ ಸಹೋದ್ಯೋಗಿಗಳು ದಿನಸಿ ಸಾಮಗ್ರಿಗಳನ್ನು ಖರೀದಿಸುವ ವೇಳೆ ಲಾರಿ ಚಾಲಕರಾಗಿರುವ ರಿಜಿಶ್ ಉಮೇಶ್ ಯಾರೆಂದು ಪ್ರಶ್ನಿಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿಯೇ ಇದ್ದ ಉಮೇಶ್ ತಾನೇ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಉಮೇಶ್ ರನ್ನು ನಿಂದಿಸಿ ಹಲ್ಲೆಗೆ ರಿಜೀಶ್ ಮುಂದಾದರು. ಈ ಸಂದರ್ಭ ಸಹೋದ್ಯೋಗಿಯಾದ ಉಪ್ಪಾರಪಳಿಕೆಯ ಪವರ್ ಮ್ಯಾನ್ ದುಂಡಪ್ಪ ಮಧ್ಯಪ್ರವೇಶಿಸಿ ಮಾತುಕತೆ ನಡೆಸಿ ಸಮಾಧಾನಿಸಿದ್ದಾರೆ.

ಪರಿಸ್ಥಿತಿ ಶಾಂತಗೊಳಿಸಿ, ತೆರಳುವಾಗ ಪಕ್ಕದಲ್ಲಿ ಇದ್ದ ಸೋಡಾ ಬಾಟಲಿಯಿಂದ ರಿಜೀಶ್ ದುಂಡಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ಗಂಭೀರ ಗಾಯಗೊಂಡ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *