Connect with us

    LATEST NEWS

    ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ

    ಅಟಲ್​ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ

    ನವದೆಹಲಿ ಅಗಸ್ಟ್ 16:  ಬಿಜೆಪಿ ಹಿರಿಯ ಮುಖಂಡ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ ಎಂದು ಎಮ್ಸ್ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

    ಸುಮಾರು ದಿನಗಳಿಂದ ಬಹು ಅಂಗಾಂಗ ವೈಫಲ್ಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಮಾಜಿ ಪ್ರಧಾನಿ ವಾಜಪೇಯಿ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಸಂಜೆಯಿಂದ ವಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದ್ದರು.

    ಕಳೆದ 40 ದಿನಗಳಿಂದ ದೆಹಲಿಯ ಏಮ್ಸ್ ಆಸ್ಪತ್ರೆ ಆಸ್ಪತ್ರೆಯಲ್ಲಿ ಅಟಲ್​ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿರುವ ಮಾಜಿ ಪ್ರಧಾನಿ 24 ಗಂಟೆಗಳಿಂದ ಅವರ ಆರೋಗ್ಯ ಗಂಭೀರ ಎಂದು ಪ್ರಕಟಣೆ ತಿಳಿಸಿದೆ. ಮಾಜಿ ಪ್ರಧಾನಿ ಅವರಿಗೆ ತುರ್ತುನಿಗಾ ಘಟಕದಲ್ಲಿ ವೈದ್ಯರಿಂದ ಚಿಕಿತ್ಸೆ ಮುಂದುವರಿಸಿದ್ದಾರೆ.

    ಈ ನಡುವೆ  ಈಗಾಗಲೇ ಏಮ್ಸ್ ಆಸ್ಪತ್ರೆಗೆ ಬಿಜೆಪಿ ನಾಯಕರೇ ದಂಡೆ ಆಗಮಿಸಿ, ವಾಜಪೇಯಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *