LATEST NEWS
ಮಾಂಸದಂಗಡಿಯ ಮಾಲೀಕನ ಮೇಲೆ ತಲವಾರು ದಾಳಿ

ಮಂಗಳೂರು ಜೂ 19: ಮಾಂಸದಂಗಡಿ ನಡೆಸುತ್ತಿದ್ದ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿ ಹತ್ಯೆಗೆ ಯತ್ನಿಸಿದ ಘಟನೆ ತಡರಾತ್ರಿ ತೊಕ್ಕೊಟ್ಟು ಒಳಪೇಟೆ ಎಂಬಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ಹಳೆಕೋಟೆ ನಿವಾಸಿ ನಝೀರ್(47) ಎಂದು ಗುರುತಿಸಲಾಗಿದೆ.
ಇವರು ತೊಕ್ಕೊಟ್ಟು ಒಳಪೇಟೆಯತ್ತ ಬೀಡಾ ತಿನ್ನಲು ಬಂದಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ತಲವಾರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.