LATEST NEWS
ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳ ಮೇಲೆ ಜೈಲಿನಲ್ಲಿ ಹಲ್ಲೆ, ಆಸ್ಪತ್ರೆಗೆ ದಾಖಲು


ಮಂಗಳೂರು ಜಿಲ್ಲಾ ಕಾರಾಗೃಹ
ಮಂಗಳೂರು,ಸೆಪ್ಟೆಂಬರ್ 11: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಅರೋಪಿಗಳ ಮೇಲೆ ಹಲ್ಲೆ ನಡೆದಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಇಂದು ಅಪರಾಹ್ನ ಈ ಘಟನೆ ನಡೆದಿದೆ. ಬಜಿಲಕೇರಿ ಧನರಾಜ್ ಮತ್ತು ತಂಡದವರು ಭಾಸ್ಕರ ಶೆಟ್ಟಿ ಪುತ್ರ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಹಲ್ಲೆ ನಡೆಸಿದ್ದಾರೆ.

ನಿರಂಜನ್ ಭಟ್ ಮತ್ತು ನವನೀತ್ ಶೆಟ್ಟಿ
ಹಲ್ಲೆಗೊಳಗಾದ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ತೀವೃ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆಗೆ ಕಾರಣಗಳು ತಿಳಿದು ಬಂದಿಲ್ಲ. 2016 ರ ಜುಲೈ ತಿಂಗಳಿನಲ್ಲಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿತ್ತು. ಸ್ವಂತ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಮತ್ತು ಜ್ಯೋತಿಷಿ ನಿರಂಜನ್ ಭಟ್ ಈ ಪ್ರಕರಣದಲ್ಲಿ ಪ್ರಮುಖ ಅರೋಪಿಗಳಾಗಿದ್ದಾರೆ.
ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಕೊಂದು ಹೋಮಕುಂಡದಲ್ಲಿ ಭಾಸ್ಕರ್ ಶೆಟ್ಟಿ ಶವ ದಹಿಸಿದ ಆರೋಪ ಇವರ ಮೇಲಿದ್ದು, ಇತ್ತಿಚೇಗಷ್ಟೇ ಇವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು.
ವಿಡಿಯೋಗಾಕಿ ಒತ್ತಿರಿ..