Connect with us

LATEST NEWS

ಮಂಗಳೂರು – ಡ್ರಗ್ ನಶೆಯಲ್ಲಿದ್ದ ವಿಧ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ

ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ನಿನ್ನೆ ರಾತ್ರಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಚೆಕ್ ಪಾಯಿಂಟ್‌ ನಲ್ಲಿ ಕರ್ತವ್ಯದಲ್ಲಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ಪೊಲೀಸ್ ಸಿಬಂದಿಗಳ ಮೇಲೆ ಹಲ್ಲೆ ನಡೆಸಿ ಅವರ ರೈಫಲ್ ಕಿತ್ತು ನೆಲಕ್ಕೆ ಹೊಡೆದು ಧ್ವಂಸ ಮಾಡಿದ್ದಾರೆ.


ಘಟನೆ ನಡೆಯುತ್ತಿದ್ದಂತೆ ಕೂಡಲೇ  ಹೆಚ್ಚುವರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ನೀರುಮಾರ್ಗ ಖಾಸಾಗಿ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದ್ದು ಎಲ್ಲಾ ನಾಲ್ವರೂ ವಿದ್ಯಾರ್ಥಿಗಳು ಡ್ರಗ್ ನಶೆಯಲ್ಲಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಸೀಲನೆ ನಡೆಸಿದ್ದು ಈ ಸಂಬಂಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.  ಕಳೆದ  2 ತಿಂಗಳಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ನಡೆದ ನಾಲ್ಕನೇ ದಾಳಿ ಪ್ರಕರಣ ಇದಾಗಿದೆ.

Facebook Comments

comments