Connect with us

    LATEST NEWS

    ಹಲ್ಲೆಗೊಳಗಾದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ…!!

    ನ್ಯೂಯಾರ್ಕ್:ಅಪರಿಚಿತ ವ್ಯಕ್ತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿದೆ. ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಮತ್ತು ಅವರ ಯಕೃತ್ತು ಸಹ ಹಲ್ಲೆಯಿಂದ ಹಾನಿಗೊಳಗಾಗಿದೆ ಎಂದು ಅವರ ಸಹವರ್ತಿಗಳು ತಿಳಿಸಿದ್ದಾರೆ.


    ಸಲ್ಮಾನ್ ರಶ್ದಿ ಆರೋಗ್ಯದ ಕುರಿತಾಗಿ ಒಳ್ಳೆಯ ಸುದ್ದಿಗಳು ಬರುತ್ತಿಲ್ಲ. ಸಲ್ಮಾನ್ ಅವರು ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ತೋಳಿನ ನರಗಳು ತುಂಡಾಗಿವೆ ಮತ್ತು ಅವರ ಯಕೃತ್ತು ಇರಿತದಿಂದ ಹಾನಿಗೊಳಗಾಗಿದೆ’ ಎಂದು ಆಂಡ್ರ್ಯೂ ವೈಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ‘ದಿ ಸೆಟನಿಕ್ ವರ್ಸಸ್’ಕೃತಿ ಬರೆದ ನಂತರ ಹಲವು ವರ್ಷಗಳಿಂದ ಇಸ್ಲಾಮಿಸ್ಟ್‌ಗಳಿಂದ ಜೀವ ಬೆದರಿಕೆಗಳನ್ನು ಎದುರಿಸುತ್ತಿದ್ದ ರಶ್ದಿ, ಪಶ್ಚಿಮ ನ್ಯೂಯಾರ್ಕ್ ರಾಜ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ 24 ವರ್ಷದ ನ್ಯೂಜೆರ್ಸಿ ನಿವಾಸಿಯಿಂದ ಇರಿತಕ್ಕೊಳಗಾಗಿದ್ದರು. ರಶ್ದಿಯನ್ನು ಇರಿದ ಆರೋಪಿಯನ್ನು ನ್ಯೂಜೆರ್ಸಿಯ ಫೇರ್‌ವ್ಯೂನ ಹದಿ ಮತರ್ (24) ಎಂದು ಗುರುತಿಸಲಾಗಿದೆ ಎಂದು ನ್ಯೂಯಾರ್ಕ್ ರಾಜ್ಯ ಪೊಲೀಸ್‌ನ ಮೇಜರ್ ಯುಜಿನ್ ಸ್ಟಾನಿಸ್ಜೆವ್ಸ್ಕಿ ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply