LATEST NEWS
ಸೌದಿ ಅರಾಮ್ಕೋ ತೈಲ ಘಟಕದ ಮೇಲೆ ಕ್ಷಿಪಣಿ ದಾಳಿ…ಗಗನಕ್ಕೆರಲಿದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ…. !!
ಲಂಡನ್: ದೇಶದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಲ್ಲೇ ತೊಡಗಿದೆ. ಈ ನಡುವೆ ಮತ್ತೊಂದು ಸಂಕಷ್ಟದ ಸುದ್ದಿ ಬಂದಿದ್ದು, ವಿಶ್ವದ ಅತಿದೊಡ್ಡ ತೈಲ ಕಂಪನಿಯಾಗಿರುವ ಸರ್ಕಾರಿ ಸ್ವಾಮ್ಯದ ಸೌದಿ ಅರಾಮ್ಕೋ ತೈಲ ಘಟಕದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆದಿದ್ದು, ಈ ಹಿನ್ನಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆಯಾಗಿದೆ.
ಇರಾನ್ ಬೆಂಬಲಿತ ಯೆಮೆನ್‌ನ ಹೌತಿ ಪಡೆಗಳು ಭಾನುವಾರ ಸೌದಿ ಅರಾಮ್ಕೊದ ಘಟಕದ ಮೇಲೆ ದಾಳಿ ನಡೆಸಿದೆ. ಪರಿಣಾಮ ಸೋಮವಾರ ಒಂದು ಬ್ಯಾರೆಲ್ ಕಚ್ಚಾ ತೈಲದ ಬೆಲೆ 70 ಡಾಲರ್ ಆಗಿದ್ದರೆ ಮಂಗಳವಾರ ಈ ಬೆಲೆ 71 ಡಾಲರ್‌ಗೆ ಏರಿಕೆ ಆಗಿದೆ.
ಕೋವಿಡ್ 19 ಬಳಿಕ ಇದೇ ಮೊದಲ ಬಾರಿಗೆ ಈ ಮಟ್ಟವನ್ನು ತಲುಪಿದ್ದು ಈ ರೀತಿಯ ದಾಳಿಯಿಂದ ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಮತ್ತಷ್ಟು ಏರಿಕೆ ಆಗಬಹುದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಅಮೆರಿಕದ ಡಬ್ಲ್ಯುಟಿಐ ದರ್ಜೆಯ ಕಚ್ಚಾ ತೈಲ ದರ ಎರಡು ವರ್ಷಗಳಿಗೂ ಹೆಚ್ಚಿನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ದರಗಳು ಗರಿಷ್ಠ ಮಟ್ಟದಲ್ಲಿವೆ. ಕಚ್ಚಾ ತೈಲ ದರ ನಿರಂತರವಾಗಿ ಏರಿಕೆ ಆಗುತ್ತಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಇಂಧನ ದರ ಮತ್ತಷ್ಟು ಹೆಚ್ಚಾಗಲಿದೆ.