Connect with us

LATEST NEWS

ಕುಂದಾಪುರ – ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ….!!

ಕುಂದಾಪುರ ಅಗಸ್ಟ್ 05: ಶಾಲೆಗೆ ಹೋಗಿದ್ದ ಮಕ್ಕಳ ಬರುವಿಕೆಗಾಗಿ ರಸ್ತೆ ಬದಿಯಲ್ಲಿ ನಿಂತು ಕಾಯುತ್ತಿದ್ದ ಮಹಿಳೆ ಮೇಲೆ ದರೋಡೆಕೋರರು ಕಬ್ಬಿಣ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಎಂಬಲ್ಲಿ ನಡೆದಿದೆ.


ಹಲ್ಲೆಗೊಳಗಾದ ಮಹಿಳೆಯನ್ನು ದೇವಕಿ (35) ಎಂದು ಗುರುತಿಸಲಾಗಿದ್ದು, ಇವರು ಸಂಜೆ 4:15ರ ಸಮಯಕ್ಕೆ ದಬ್ಬೆಕಟ್ಟೆ ಪ್ರಮುಖ ರಸ್ತೆಯ ಸಮೀಪ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತರು ಬೈಕ್‌ನಲ್ಲಿ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಈ ಕೃತ್ಯ ಎಸೆಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಲ್ಲೆಯಿಂದ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Click to comment

You must be logged in to post a comment Login

Leave a Reply