LATEST NEWS
ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ದಾಳಿ, ಡಿ. 4 ರ ಮಂಗಳೂರಿನ ಪ್ರತಿಭಟನಾ ಸಭೆಗೆ ಬಿಜೆಪಿ ಯುವಮೋರ್ಚಾ ಬೆಂಬಲ
ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಡಿ. 4 ರಂದು ಮಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಭಟನಾ ಸಭೆಗೆ ಬಿಜೆಪಿ ಯುವಮೋರ್ಚಾ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಮಂಗಳೂರು : ಬಾಂಗ್ಲಾದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಡಿ. 4 ರಂದು ಮಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಭಟನಾ ಸಭೆಗೆ ಬಿಜೆಪಿ ಯುವಮೋರ್ಚಾ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿರಿಸಿ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಪ್ರತಿಭಟನಾ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಯಶಸ್ವಿಗೊಳಿಸುವಂತೆ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಅವರು ಮನವಿ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹಾಗೂ ಹಿಂದುಗಳನ್ನು ಗುರಿಯಾಗಿಸಿಕೊಂಡು ಅಲ್ಲಿನ ಮೂಲಭೂತವಾದಿಗಳು ನಡೆಸುತ್ತಿರುವ ದಾಳಿ ಖಂಡನೀಯ. ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಸಹಿಷ್ಣುತೆ ತಾಂಡವವಾಡುತಿದ್ದು ಜಗತ್ತು ಅದರತ್ತ ಕಣ್ಣು ಹಾಯಿಸುತ್ತಿಲ್ಲ. ಅಲ್ಲಿನ ನೊಂದ ಹಿಂದುಗಳ ಪರವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಡಿಸೆಂಬರ್ 4 ರಂದು ಬೆಳಗ್ಗೆ 10 ಗಂಟೆಗೆ ಜ್ಯೋತಿ ವೃತ್ತದಿಂದ ಹಂಪನಕಟ್ಟೆ ತಾಲೂಕು ಕಚೇರಿಯ ವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪ್ರತಿಭಟನಾ ಸಭೆ ನಡೆಯಲಿದ್ದು ಬಿಜೆಪಿ ಯುವಮೋರ್ಚಾ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ನಂದನ್ ಮಲ್ಯ ಹೇಳಿದ್ದಾರೆ.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಎಲ್ಲಾ ಶಾಸಕರು, ಹಿಂದೂ ಮುಖಂಡರು ಹಾಗೂ ಮಠಾಧೀಶರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ಕಾಲೇಜು ವಿಧ್ಯಾರ್ಥಿಗಳು, ವೃತ್ತಿಪರರು ಸೇರಿದಂತೆ ಹಿಂದು ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು. ಆ ಮೂಲಕ ದೌರ್ಜನ್ಯಕ್ಕೊಳಗಾಗುತ್ತಿರುವ ಬಾಂಗ್ಲಾ ಹಿಂದುಗಳ ಪರವಾಗಿ ನಡೆಯುವ ಹೋರಾಟಕ್ಕೆ ಕೈ ಜೋಡಿಸುವಂತೆ ನಂದನ್ ಮಲ್ಯ ವಿನಂತಿಸಿದ್ದಾರೆ.